ಹಾಸನ

ಬರೋಬ್ಬರಿ ಒಂದು ಗಂಟೆ ಪೂಜೆ!

Published On :

ಹೊಳೆನರಸೀಪುರ: ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಜೆಡಿಎಸ್  ವರಿಷ್ಠ ಎಚ್.ಡಿ. ದೇವೇಗೌಡ ಅವರು ಮಂಗಳವಾರ ನಾಮಪತ್ರ ಸಲ್ಲಿಕೆಗೂ ಮೊದಲು ಪತ್ನಿ ಹಾಗೂ ಪುತ್ರನೊಂದಿಗೆ ಪಟ್ಟಣದಲ್ಲಿರುವ ತಮ್ಮ ಆರಾಧ್ಯ ದೈವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಸೋಮವಾರ ರಾತ್ರಿಯೇ ಆಗಮಿಸಿದ್ದ ದೇವೇಗೌಡರು, ಮೊದಲಿಗೆ ಚನ್ನರಾಯಪಟ್ಟಣ ತಾಲೂಕು ಯಲಿಯೂರು ಗ್ರಾಮದಲ್ಲಿ ಇರುವ ತಮ್ಮ ಮನೆ ದೇವತೆ ಶ್ರೀ ದೇವಿರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಹೊಳೆನರಸೀಪುರದಲ್ಲಿ ವಾಸ್ತವ್ಯ ಮಾಡಿದ್ದರು. ಶಿವಗೋತ್ರದವರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮಂಗಳವಾರ ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಇಲ್ಲಿನ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ತೆರಳಿ ಸುಮಾರು ಒಂದು ಗಂಟೆ ಕಾಲ ಪೂಜೆ ಸಲ್ಲಿಸಿದರಲ್ಲದೆ, ಈ ಸಂದರ್ಭದಲ್ಲಿ ತಮ್ಮ ನಾಮಪತ್ರ ಹಾಗೂ ರಾಜ್ಯದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸಲಿರುವವರ ನಾಮಪತ್ರಗಳಿಗೂ ಇದೇ ವೇಳೆ ಪೂಜೆ ಸಲ್ಲಿಸಲಾಯಿತು. ದೇವಾಲಯದಲ್ಲಿ ನವಗ್ರಹ ಪೂಜೆ, ಅಷ್ಟೋತ್ತರ ಶತನಾಮಾವಳಿ ಪೂಜೆಗಳನ್ನು ಸಲ್ಲಿಸಲಾಯಿತು. ಇದರೊಂದಿಗೆ ದೇವಾಲಯದಲ್ಲಿನ ಗಣಪತಿ, ವೇಣುಗೋಪಾಲಸ್ವಾಮಿ, ಸತ್ಯನಾರಾಯಣಸ್ವಾಮಿ ದೇವರುಗಳಿಗೂ ಪೂಜೆ ಸಲ್ಲಿಸಿದ ಮಾಜಿ ಪ್ರದಾನಿ ಎಚ್.ಡಿ.ದೇವೇಗೌಡ, ನಂತರ ತಾಲೂಕಿನ ಮಾವಿನಕೆರೆ ಬಳಿಯಲ್ಲಿನ ಬೆಟ್ಟದ ರಂಗನಾಥಸ್ವಾಮಿ ಹಾಗೂ ತವರೂರಾದ ಹರದನಹಳ್ಳಿಯಲ್ಲಿನ ತಮ್ಮ ಕುಲದೇವರಾದ ಶಿವನಿಗೆ ಪೂಜೆ ಸಲ್ಲಿಸಿದ ಬಳಿಕವಷ್ಟೇ ಉಮೇದುವಾರಿಕೆ ಸಲ್ಲಿಸಲು ಹಾಸನಕ್ಕೆ ತೆರಳಿದರು.
ಪುರಸಭೆ ಮಾಜಿ ಅಧ್ಯಕ್ಷ ಟಿ. ಮಲ್ಲೇಶ್, ಗುತ್ತಿಗೆದಾರ ಟಿ.ಶಿವಕುಮಾರ್, ಪುರಸಭೆ ಸದಸ್ಯರಾದ ಎಚ್.ವಿ. ಪುಟ್ಟರಾಜು, ಸಲೀಂ, ಎಂ.ಎಸ್.ಶಾಂತರಾಜು, ಎಪಿಎಂಸಿ ಅಧ್ಯಕ್ಷ ಎಚ್.ಎಸ್. ಸುದರ್ಶನ್, ಮಾಜಿ ಸದಸ್ಯ ಎಚ್.ಕೆ. ಕುಮಾರ್ ವಾಲೆ ಕುಮಾರ್, ರಾಜು, ಚಲುವರಾಜು, ಮುತ್ತೂರಾಜ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.