ಭಾಷಣದಲ್ಲಷ್ಟೇ ದಲಿತರ ಉದ್ಧಾರ
ಕ.ಪ್ರ. ವಾರ್ತೆ ಟಿ ಹಾಸನ ಟಿ ಮಾ. 25
ದಲಿತರ ಮತಗಳನ್ನು ಪಡೆಯುತಿರುವ ಕಾಂಗ್ರೆಸ್ಪ್ಕ್ಷ ಅವರ ಏಳಿಗೆಗೆ ಯಾವುದೇ ಯೋಜನೆಗಳನ್ನು ಜಾರಿಗೆ ತರಲು ವಿಫಲವಾಗಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಟೀಕಿಸಿದರು.
ಅವರು ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ ಜಿಲ್ಲಾ ಜೆಡಿಎಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಕೇವಲ ಭಾಷಣಗಳಲ್ಲಿ ಮಾತ್ರ ದಲಿತರ ಉದ್ಧಾರದ ಮಾತನಾಡುತ್ತಾ ತೃಪ್ತಿಪಡಿಸುತಿದ್ದಾರೆ. ದಲಿತರ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿಗೆ ತಂದರೆ ಅವರು ಅಭಿವೃದ್ಧಿ ಹೊಂದಿ ದಲಿತರ ಮತಗಳು ನಮ್ಮಿಂದ ಕೈ ತಪ್ಪುತ್ತವೆ ಎಂಬ ಅತಂಕ ಕಾಂಗ್ರೆಸಿಗರಿಗೆ ಕಾಡುತ್ತಿದೆ ಎಂದು ಹೇಳಿದರು.
ಉಚಿತ ಉನ್ನತ ಶಿಕ್ಷಣ: 50 ವರ್ಷ ದೇಶವಾಳಿದ ಕಾಂಗ್ರೆಸ್, ದಲಿತ ಸಮುದಾಯಕ್ಕೆ ನೀಡಿದ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಎಚ್.ಡಿ. ದೇವೇಗೌಡರು ಹಿಂದೆ ಲೋಕೋಪಯೋಗಿ ಮಂತ್ರಿಯಾಗಿದ್ದಾಗ ದಲಿತ ಸಮುದಾಯಕ್ಕೆ ಗಂಗಾ ಕಲ್ಯಾಣ, ದಲಿತರ ಬಡಾವಣೆ ಗಳಿಗೆ ಕಾಂಕ್ರೀಟ್ ರಸ್ತೆ, ದಲಿತ ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ವ್ಯವಸ್ಥೆ ಜಾರಿಗೆ ತಂದರು.
ದಲಿತರ ನೇಮಕ: ಮೀಸಲಾತಿ ಇಲ್ಲದ ಸಂದರ್ಭದಲ್ಲಿ ಹಾಸನ ಜಿಲ್ಲಾ ಪಂಚಾಯ್ತಿಗೆ ದಲಿತ ಸಮುದಾಯದ ವಿದ್ಯಾವಂತ ಬಾಲಕೃಷ್ಣಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಜಿಲ್ಲೆಯ ದಲಿತ ಸಮುದಾಯದ ಚಂದ್ರಪ್ರಸಾದ್ ತ್ಯಾಗಿ, ಎಚ್.ಕೆ. ಕುಮಾರಸ್ವಾಮಿ ಅವರಿಗೆ ರಾಜ್ಯಮಟ್ಟದಲ್ಲಿ ಉನ್ನತ ಸ್ಥಾನ ನೀಡಿದರು ಎಂದರು.
ಮನವಿ: ದೇವೇಗೌಡರು ಹಾಸನ ಜಿಲ್ಲೆಯ ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತ ಸಮುದಾಯಕ್ಕೆ ಸಮುದಾಯ ಭವನಗಳು ಮತ್ತು ಅವರ ಬಡಾವಣೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಿದ್ದಾರೆ.
ಕಾಂಗ್ರೆಸ್, ಬಿಜೆಪಿ ಪಕ್ಷಗಳು ದಲಿತರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿವೆ. ಆ ಪಕ್ಷಕ್ಕೆ ದಲಿತರ ಏಳಿಗೆ ಅವರಿಗೆ ಮುಖ್ಯವಾಗಿಲ್ಲ. ಇದನ್ನರಿತು ದೇವೇಗೌಡರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎಚ್.ಕೆ. ಕುಮಾರಸ್ವಾಮಿ, ಹೆಚ್.ಎಸ್. ಪ್ರಕಾಶ್, ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಪಟೇಲ್ ಶಿವರಾಂ, ಜಿಲ್ಲಾಧ್ಯಕ್ಷ ಜಾವಗಲ್ ರಾಜಶೇಖರ್, ಮಾಜಿ ಶಾಸಕರಾದ ಎ.ಟಿ. ರಾಮಸ್ವಾಮಿ, ಬಿ.ವಿ. ಕರೀಗೌಡ, ಮುಖಂಡರಾದ ಕೆ.ಎಂ. ರಾಜೇಗೌಡ, ಎಂ.ಜಿ. ದೊಡ್ಡೇಗೌಡ ಕೆ.ಎಸ್. ಲಿಂಗೇಶ್, ಸತ್ಯನಾರಾಯಣ್, ಚನ್ನವೀರಪ್ಪ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಅಂಬಿಕಾ ರಾಮಣ್ಣ, ನಗರಸಭೆ ಅಧ್ಯಕ್ಷೆ ಶ್ರೀ ವಿದ್ಯಾ ಆನಂದ್, ಜಿಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ ಮೂರ್ತಿ, ಜಿ.ಟಿ. ಇಂದಿರಾ, ಕಾಮಾಕ್ಷಿರಾಜು, ಜಿಪಂ ಸದಸ್ಯ ಮಲ್ಲಿಗೆವಾಳು ದ್ಯಾವಪ್ಪ, ಶಿವಶಂಕರ ಕುಂಟೆ, ಪುರುಷೋತ್ತಮ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

