ಕ್ಷಯ ನಿಯಂತ್ರಣಕ್ಕೆ ಖಾಸಗಿ ವಲಯದ ಸಹಕಾರ ಬೇಕು
ಹಾಸನ: ಕ್ಷಯರೋಗ ನಿಯಂತ್ರಣಕ್ಕೆ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳು ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ. ಪಿ.ಎಲ್. ಶ್ಯಾಮಲಾದೇವಿ ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ಕ್ಷಯ ರೋಗ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಹಕಾರ: ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಕೇಶವರಾಜ್ ಮಾತನಾಡಿ, ಈ ವರ್ಷದ ವಿಶ್ವ ಆರೋಗ್ಯ ಸಂಸ್ಥೆಯ ಘೋಷಣೆಯಂತೆ ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಮೂರು ಮಿಲಿಯನ್ ಕ್ಷಯರೋಗಿಗಳನ್ನು ಗುರುತಿಸಿ, ಚಿಕಿತ್ಸೆ ನೀಡಿ ಕ್ಷಯರೋಗವನ್ನು ಗುಣಪಡಿಸಲು ಎಲ್ಲರ ಸಹಕಾರ ಕೋರಿದರು.
ಕ್ಷಯರೋಗ ತಜ್ಞ ಡಾ. ನಾರಾಯಣ್ ಕಾರ್ಯಕ್ರಮ ಉದ್ಘಾಟಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ ಡಾ. ಚನ್ನವೀರಪ್ಪ, ಡಾ. ನಾಗಭೂಷಣ್ ರಾವ್, ಆಶಾ ಕಾರ್ಯಕರ್ತೆ ಪೂರ್ಣಿಮಾ, ಅಂಗನವಾಡಿ ಕಾರ್ಯಕರ್ತೆ, ಸುಕನ್ಯ, ಗ್ರೂಪ್ ಡಿ ನೌಕರ ರಂಗೇಗೌಡ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಂಕರ್ ಇತರರು ಇದ್ದರು.
ಇದಕ್ಕೂ ಮೊದಲು ಜಿಲ್ಲಾಸ್ಪತ್ರೆಯ ಆವರಣದಲ್ಲಿ ವಿಶ್ವಕ್ಷಯರೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಅಧ್ಯಕ್ಷ ಉಪೇಂದ್ರ ಪ್ರತಾಪ್ ಸಿಂಗ್ ಚಾಲನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

