ಹಾಸನ

ದ್ವಿತೀಯ ಪಿಯು ಪರೀಕ್ಷೆ ವೇಳೆ ನಕಲಿ ವಿದ್ಯಾರ್ಥಿ ಸೆರೆ

Published On :

ಹೊಳೆನರಸೀಪುರ: ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ನಕಲಿ ವಿದ್ಯಾರ್ಥಿಯೊಬ್ಬ ಬರೆಯುವ ಸಿಕ್ಕಿಹಾಕಿಕೊಂಡ ಪ್ರಸಂಗ ಬುಧವಾರ ನಡೆದಿದೆ. ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ಸಿಕ್ಕಿಬಿದ್ದಿರುವ ಹುಡುಗ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಇಲ್ಲಿನ ನ್ಯಾಯಾಲಯದ ರಸ್ತೆಯಲ್ಲಿನ ಆದರ್ಶ ಶಾಲೆಯ ಪರೀಕ್ಷಾ ಕೇಂದ್ರದಲ್ಲಿನ ಕೊಠಡಿ ಸಂಖ್ಯೆ 5ರಲ್ಲಿ ನಗರನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಂಗೇನಹಳ್ಳಿಯ ಆರ್.ಎಸ್. ಕೃಷ್ಣೇಗೌಡ ಎಂಬ ವಿದ್ಯಾರ್ಥಿಯ ಬದಲಿಗೆ, ನಗರನಹಳ್ಳಿ ಗ್ರಾಮದ ರವಿಕುಮಾರ್ ಎಂಬ ವಿದ್ಯಾರ್ಥಿಯು ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ.  ಈ ಕುರಿತಂತೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪರೀಕ್ಷಾ ಕೆಂದ್ರದ ಅಧೀಕ್ಷಕರಾದ ಸತೀಶ್ ಕುಮಾರ್ ಅವರು ಸ್ಥಳದಲ್ಲಿದ್ದ ಸ್ಥಳೀಯ ಪರೀಕ್ಷಾ ಜಾಗೃತ ದಳದವರೊಂದಿಗೆ ಕೊಠಡಿಗೆ ತೆರಳಿ ಪರೀಕ್ಷಿಸಿದಾಗ ನಕಲಿ ವಿದ್ಯಾರ್ಥಿ ಸಿಕ್ಕಿಹಾಕಿಕೊಂಡಿದ್ದಾನೆ. ಕೂಡಲೇ ನಕಲಿ ವಿದ್ಯಾರ್ಥಿಯಿಂದ ಪರೀಕ್ಷಾ ಪ್ರವೇಶ ಪತ್ರ ಹಾಗೂ ಉತ್ತರ ಪತ್ರಿಕೆಗಳನ್ನು ವಶಪಡಿಸಿಕೊಂಡ ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಕೂಡಲೇ ನಕಲಿ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದರು.
ಕಳೆದ ಎರಡು ದಿನಗಳ ಹಿಂದೆಯಷ್ಟೆ ಇದೇ ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿಯ ಕನ್ನಡ ಭಾಷಾ ವಿಷಯವನ್ನು ಇಬ್ಬರು ನಕಲಿ ವಿದ್ಯಾರ್ಥಿಗಳು ಬರೆಯುತ್ತಿದ್ದ ವೇಳೆ ಜಾಗೃತದಳದ ಕೈಗೆ ಸಿಕ್ಕಿಬಿದ್ದು ಪೊಲೀಸರ ಅತಿಥಿಯಾಗಿದ್ದ ಪ್ರಕರಣ ಮಾಸುವ ಮೊದಲೇ, ಮತ್ತೊಬ್ಬ ನಕಲಿ ವಿದ್ಯಾರ್ಥಿ ಸಿಕ್ಕಿ ಬಿದ್ದಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಬುಧವಾರ ಸಿಕ್ಕಿಬಿದ್ದಿರುವ ನಕಲಿ ವಿದ್ಯಾರ್ಥಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂಭವವಿದೆ ಎಂದು ಮೂಲಗಳು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.