ವೈದ್ಯರ ಮೇಲೆ ಹಲ್ಲೆ: ಇಬ್ಬರ ಬಂಧನ
ಅರಕಲಗೂಡು: ಕರ್ತವ್ಯದ ಮೇಲಿದ್ದ ವೈದ್ಯಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಪೊಲೀಸರು ಬಂಧಿಸಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆ ಸಮಯದಲ್ಲಿ ಕ್ಯಾನ್ಸರ್ ರೋಗಿಯೊಬ್ಬರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದಾಗ, ತಮ್ಮ ಸಂಬಂಧಿಕರಿಗೂ ಚಿಕಿತ್ಸೆ ನೀಡುವಂತೆ ಬಂದ ಇಬ್ಬರು ವ್ಯಕ್ತಿಗಳು ವೈದ್ಯರ ಬಳಿ ಹಠ ಮಾಡಿದ್ದಾರೆ.
ಬೇರೊಬ್ಬ ರೋಗಿಯ ತಪಾಸಣೆಯಲ್ಲಿ ನಿರತರಾಗಿದ್ದ ವೈದ್ಯರು ಇವರ ಕಡೆಯ ರೋಗಿಗೆ ಗಮನ ಕೊಡಲು ಕೊಂಚ ವಿಳಂಬ ಮಾಡಿದ್ದಾರೆ. ಇದೇ ಕಾರಣಕ್ಕಾಗಿ ವೈದ್ಯ ಡಾ.ರೇವಣ್ಣ ಅವರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಜೊತೆಗೆ, ಆ ಸಂದರ್ಭದಲ್ಲಿದ್ದ ಇತರ ಸಿಬ್ಬಂದಿಗಳ ಮೇಲೂ ಹಲ್ಲೆ ನಡೆಸಿದ್ದಾರೆ.
ಆಗ, ಸ್ಥಳದಲ್ಲೇ ಇದ್ದ ಇತರೆ ಸಾರ್ವಜನಿಕರು ವೈದ್ಯರ ಮೇಲಿನ ಹಲ್ಲೆ ಬಗೆಗೆ ಪ್ರಶ್ನಿಸಿದಾಗ ಅವರ ಮೇಲೂ ಹರಿಹಾಯ್ದ ಆರೋಪಿಗಳು ಅನುಚಿತವಾಗಿ ವರ್ತಿಸಿದರೆಂದು ಆರೋಪಿಸಲಾಗಿದೆ.
ಈ ಸಂಬಂಧ ವೈದ್ಯರು ಅರಕಲಗೂಡು ಪೊಲೀಸರಿಗೆ ದೂರು ನೀಡಿದ್ದು, ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಅರಕಲಗೂಡು ತಾಲೂಕಿನ ತೇಜೂರು ಗ್ರಾಮದ ಪ್ರವೀಣ್ ಮತ್ತು ನವೀನ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

