ಉದ್ಯಮಿ ಜಯಣ್ಣ ಕಾಂಗ್ರೆಸ್ ಸೇರ್ಪಡೆ
ಅರಸೀಕೆರೆ: ಇಲ್ಲಿನ ಉದ್ಯಮಿ ಹಾಗೂ ದಾನಿ ಜೆ.ಪಿ. ಜಯಣ್ಣ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ದೇವರಾಜು ಅರಸು ನಂತರ, ರಾಜ್ಯವು ಹಿಂದುಳಿದ ವರ್ಗಗಳ ಉದಾತ್ತ ಚಿಂತನೆಯುಳ್ಳ ಸಿದ್ದರಾಮಯ್ಯರವರನ್ನು ಮುಖ್ಯಮಂತ್ರಿಯನ್ನಾಗಿ ಕಾಣಲು ಸಾಧ್ಯವಾಗಿದೆ. ಅರಸು ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಮೇಲೆತ್ತುವ ಕಾರ್ಯದಲ್ಲಿ ಸಿಎಂ ತೊಡಗಿದ್ದಾರೆ. ಅವರ ಕೈ ಬಲ ಪಡಿಸುವ ಸಲುವಾಗಿ ಆದ್ದರಿಂದ ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದರು.
ಹಾಸನ ಜಿಲ್ಲಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ. ಮಂಜು ಮೊದಲಿನಿಂದಲೂ ತಮ್ಮ ಆತ್ಮೀಯ ಗೆಳೆಯರಾಗಿದ್ದು ಅವರ ಪರ ಚುನಾವಣೆಯಲ್ಲಿ ಪ್ರಚಾರ ಮಾಡುವುದಾಗಿ ಜಯಣ್ಣ ತಿಳಿಸಿದರು.
ಅಲ್ಲದೆ ಮಾ. 26ರಂದು ಅವರು ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ಹಾಜರಿದ್ದು, ಮಾ. 29ರಂದು ಹಾಸನದಲ್ಲಿ ನಡೆಯುವ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೂ ತೆರಳುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಡಿ.ಎಸ್.ಎಸ್. ಮುಖಂಡರಾದ ಅಣ್ಣದೊರೆ, ಬಾಲರಾಜ್, ಕಾಂಗ್ರೆಸ್ ಮುಖಂಡರಾದ ಹಾರನಹಳ್ಳಿ ಸ್ವಾಮಿ, ಕ್ಯಾತನಹಳ್ಳಿ ಪ್ರಸನ್ನ, ಭೈರಪ್ಪ, ಗೀಜಿಹಳ್ಳಿ ಪ್ರವೀಣ್, ದಯಾನಂದ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

