ಹಾಸನ

ಚುನಾವಣಾ ವೀಕ್ಷಕರ ನೇಮಕ

Published On :

ಹಾಸನ:  ಹಾಸನ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾಗಿ ಮಧ್ಯಪ್ರದೇಶದ ಪಂಚಾಯತ್ ರಾಜ್ ಇಲಾಖೆಯ ಆಯುಕ್ತ ರಘುವೀರ್ ಶ್ರೀವಾಸ್ತವ್ ಅವರನ್ನು  ಚುನಾವಣಾ ಆಯೋಗ ನೇಮಿಸಿದೆ. ರಘುವೀರ್ ಶ್ರೀವಾಸ್ತವ್ ಅವರು ಬುಧವಾರ ಹಾಸನಕ್ಕೆ ಆಗಮಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಅವರು ವಾಸ್ತವ್ಯ ಹೂಡಿದ್ದು, ಚುನಾವಣೆ ಮುಗಿಯುವವರೆಗೆ ಕ್ಷೇತ್ರ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಬಗ್ಗೆ ನಿಗಾ ವಹಿಸಲಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದಾದರೂ ಅಹವಾಲು ಇದ್ದಲ್ಲಿ ಪ್ರತಿದಿನ ಸಂಜೆ 5 ಗಂಟೆಯ ನಂತರ ವೀಕ್ಷಕರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಬಹುದಾಗಿದೆ. ಅಲ್ಲದೆ ಅವರ ಮೊಬೈಲ್ ಸಂಖ್ಯೆಗೆ (8277701101) ಅಥವಾ ದೂರವಾಣಿ ಸಂಖ್ಯೆ 08172-265041 ಸಂಪರ್ಕಿಸಬಹುದಾಗಿದೆ. ಲೋಕೋಪಯೋಗಿ ಇಲಾಖೆಯ ವಿಶೇಷ ವಿಭಾಗದ ಕಾರ್ಯಪಾಲಕ ಎಂಜಿನಿಯರ್  ನಾಗರಾಜು ಅವರನ್ನು ರಘುವೀರ್ ಶ್ರೀವಾಸ್ತವ್ ಅವರ ಲೈಸನ್ಸಿಂಗ್ ಅಧಿಕಾರಿಯಾಗಿ ನೇಮಿಸಲಾಗಿದ್ದು ಅವರ ಮೊಬೈಲ್ ಸಂಖ್ಯೆಗೆ (9448075757) ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.