ರೋಗಗಳ ಬಗ್ಗೆ ಎಚ್ಚರಿಕೆ ವಹಿಸಿ
ಹೊಳೆನರಸೀಪುರ: ಕ್ಷಯ ರೋಗ ಒಳಗೊಂಡಂತೆ ಯಾವುದೇ ರೋಗಗಳ ಬಗ್ಗೆ ವಿದ್ಯಾರ್ಥಿಗಳು ಜಾಗರೂಕರಾಗಿರಬೇಕು ಎಂದು ಪ್ರಾಂಶುಪಾಲ ಡಾ. ಜಿ.ಡಿ. ನಾರಾಯಣ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಎಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಘಟಕಗಳಾದ ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಎಸ್.ಎಸ್ ಮತ್ತು ಕ್ಯಾಥೋಲಿಕ್ ಅಸೋಶಿಯೇಶನ್ ಆಫ್ ಇಂಡಿಯಾ (ಸಿಎಚ್ಎಐ) ಸ್ವಯಂ ಸಂಸ್ಥೆ ಮತ್ತು ಅದರ ಅಂಗ ಸಂಸ್ಥೆಯಾದ (ಎಫ್ಸಿಡಿಎಸ್) ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕ್ಷಯ ರೋಗ ದಿನಾಚರಣೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಖುದ್ದಾಗಿ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ, ಇಂತಹ ಕಾಯಿಲೆಗಳ ಕುರಿತು ಅರಿವನ್ನು ಸಮುದಾಯದ ಜನರಿಗೆ ತಿಳಿಸಿಕೊಡುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದು ಅವರು ಕಿವಿಮಾತು ಹೇಳಿದರು.
40 ಎಂಡಿಆರ್ಗಳು: ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕ್ಷಯ ರೋಗ ಘಟಕದ ಸೂಪರ್ವೈಸರ್ ಮಂಜುರಾಜು, ಹಾಸನ ಜಿಲ್ಲೆಯಲ್ಲಿ 40 ಬಹು ಔಷಧಿ ನಿರೋಧಕ ಕ್ಷಯ ರೋಗಿಗಳು (ಎಂ.ಡಿ.ಆರ್ ರೋಗಿಗಳು) ಪತ್ತೆಯಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ವಾಸಿ ಮಾಡಬಹುದು: ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಚಾಲಕರೂ ಆದ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಎಂ. ಉದಯ ಕುಮಾರ್ ಮಾತನಾಡಿ, ಕ್ಷಯ ರೋಗದ ಚಿಕಿತ್ಸೆಯನ್ನು ಪೂರ್ಣ ಪ್ರಮಾಣದಲ್ಲಿ ಪಡೆದಾಗ ಮಾತ್ರ ಕ್ಷಯರೋಗವನ್ನು ವಾಸಿ ಮಾಡಬಹುದೆಂದು ಹೇಳಿದರು.
ಜಾಗೃತಿ: ಕಾರ್ಯಕ್ರಮಕ್ಕೂ ಮೊದಲು, ಕ್ಷಯ ರೋಗವನ್ನು ಕುರಿತ ಅರಿವು ಮೂಡಿಸುವ ಜಾಥಾವನ್ನು ಹಸಿರು ನಿಶಾನೆ ತೋರಿಸುವುದರ ಮೂಲಕ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಕ್ಷಯ ರೋಗದ ಕುರಿತು ಘೋಷಣೆಗಳನ್ನು ಕೂಗುತ್ತಾ ಪಡುವಲಹಿಪ್ಪೆ, ಹರದೂರು ಮತ್ತು ಮಾಕವಳ್ಳಿ ಗ್ರಾಮಗಳಲ್ಲಿ ಸಂಚರಿಸಿ ಕ್ಷಯ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಎನ್.ಎಸ್.ಎಸ್ ಸಂಚಾಲಕರಾದ ಕೆ.ವಿ. ಪಾರ್ಥೇಶ್, ಭೌತಶಾಸ್ತ್ರ ಸಹಾಯಕ ಪ್ರಾಧ್ಯಾಪಕ ನಿರಂಜನ್, ಆಂಗ್ಲಭಾಷೆ ಸಹಾಯಕ ಪ್ರಾಧ್ಯಾಪಕ ಎನ್.ಟಿ.ಶ್ರೀನಿವಾಸ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

