ಕೋಳಗುಂದ ಕೇದಿಗೆ ಮಠದಲ್ಲಿವಿಜೃಂಭಣೆಯ ಬಸವ ಜಯಂತಿ
ಹಾಸನ: ಜಾವಗಲ್ ಹೋಬಳಿ ಕೋಳಗುಂದ ಕೇದಿಗೆಮಠ, ಗ್ರಾಮಸ್ಥರು ಹಾಗೂ ಭಕ್ತಮಂಡಳಿ ವತಿಯಿಂದ
ಬಸವಜಯಂತಿ ಮತ್ತು ಮಹದೇಶ್ವರ ಸ್ವಾಮಿ ಜಾತ್ರಾಮಹೋತ್ಸವವು ಗುರುವಾರ ವಿಜೃಂಭಣೆಯಿಂದ
ನಡೆಯಿತು.
ಸಂಕಲಾಪುರ ಮಠದ ಧರ್ಮರಾಜೇಂದ್ರ ಸ್ವಾಮೀಜಿ ಧ್ವಜಾರೋಹಣ ನೇರವೇರಿಸಿದರು. ಧಾರ್ಮಿಕ ಸಮಾರಂಭವನ್ನು ಏರ್ಪಡಿಸಿದ್ದು, ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಚಿಕ್ಕಮಗಳೂರಿನ ಬಸವಮಂದಿರ ಜಯಬಸವಾನಂದ ಸ್ವಾಮೀಜಿ ಉದ್ಘಾಟಿಸಿ ಪ್ರತಿಯೊಬ್ಬ ಶರಣ ಶರಣೆಯರು ಲಿಂಗವನ್ನು ಧರಿಸಬೇಕೆಂದು ಕರೆ ನೀಡಿದರು.
ಉಪನ್ಯಾಸಕಿ ಸುಜಾತ ಮೇಲೆಗೌಡ ಬಸವತತ್ವಗಳು ಮತ್ತು ಅಕ್ಕಮಹಾದೇವಿಯ ವಚನಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿ ಕಾಯಕವೇ ಕೈಲಾಸ ಎಂಬ ತತ್ವವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಮಾರಗೊಂಡನಹಳ್ಳಿ ವಿರಕ್ತಮಠದ ಬಸವಲಿಂಗ ಸ್ವಾಮೀಜಿ, ಗುರುವಣ್ಣದೇವರ ಮಠದ ನಂಜುಂಡ ಸ್ವಾಮೀಜಿ, ಮಾಡಾಳು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಾನಿಧ್ಯವಹಿಸಿದ್ದ ಕೋಳಗುಂದ ಕೇದಿಗೆ ಮಠದ ಜಯಚಂದ್ರಶೇಖರ ಸ್ವಾಮೀಜಿ ಆಶೀರ್ವಚನ ನೀಡಿ ಸಮಾಜದಲ್ಲಿ ಪ್ರತಿನಿತ್ಯ ದರೋಡೆ, ಸುಲಿಗೆ , ಅತ್ಯಾಚಾರ, ಭ್ರಷ್ಟಾಚಾರ ನಿರಂತರವಾಗಿ ನಡೆಯುತ್ತಿದ್ದು ಶಾಂತಿ, ನೆಮ್ಮದಿ, ಇಲ್ಲದಂತಾಗಿದೆ ಎಂದರು.
ಪ್ರತಿಯೊಬ್ಬರು ಧಾರ್ಮಿಕ ಮನೋಭಾವನೆ ಬೆಳೆಸಿಕೊಂಡು ಸಹೋದರತ್ವ, ಸಹಬಾಳ್ವೆಯಿಂದ ಜೀವನ ನಡೆಸಬೇಕೆಂದರು.
ಕೆ.ಆರ್. ಮಹದೇವಪ್ಪ. ಭಾಸ್ಕರಾಚಾರ್, ಕುಮಾರಿ ಸೌಮ್ಯ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

