ಹಾಸನ

ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕರಿಸುವ ನಿರ್ಧಾರ

Published On :

ಬೇಲೂರು: ತಾಲೂಕಿನ ಅರೇಹಳ್ಳಿ ಹೋಬಳಿಯ ಗೊರವನಹಳ್ಳಿ ಮತ್ತು ಹೊಸಳ್ಳಿ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಡಳಿತರೂಢ ಸರ್ಕಾರಗಳು ವಿಫಲವಾಗಿದ್ದು, ಇದರಿಂದ ಆಕ್ರೋಶಗೊಂಡ ಎರಡು ಗ್ರಾಮಸ್ಥರು ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.
ತಾಲೂಕಿನ ಅರೇಹಳ್ಳಿ ಹೋಬಳಿಯ ಗೊರವನಹಳ್ಳಿ ಮತ್ತು ಹೊಸಳ್ಳಿ ಗ್ರಾಮಗಳು ತಾಲೂಕು  ಕೇಂದ್ರದಿಂದ ಸುಮಾರು 40 ಕಿಲೋ ಮೀಟರ್ ದೂರದಲ್ಲಿವೆ. ಈ ಗ್ರಾಮಗಳಲ್ಲಿ ಶೇ. 90ರಷ್ಟು ಜನ ಹೆಚ್ಚು ಪರಿಶಿಷ್ಟ ಜಾತಿಗೆ ಸೇರಿದವರೇ ಆಗಿದ್ದಾರೆ. ಇಲ್ಲಿನ ಗ್ರಾಮಗಳು ರಸ್ತೆ, ಕುಡಿಯುವ ನೀರು, ಸಂಪರ್ಕ ರಸ್ತೆ, ವಿದ್ಯಾಭ್ಯಾಸ ಮಾಡುವುದಕ್ಕೆ, ಸ್ಥಳಿಯವಾಗಿ ಆರೋಗ್ಯ ರಕ್ಷಣಾ ಆಸ್ಪತ್ರೆಗಳ ಕೊರತೆ ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ.
ಮೂಲಭೂತ ಸೌಕರ್ಯ ಇಲ್ಲ: ನಮ್ಮಿಂದ ಮತಗಳನ್ನು ಪಡೆದು ಗೆದ್ದು ಹೋದ ಇಲ್ಲಿನ ಶಾಸಕರು, ಕುಗ್ರಾಮವಾದ ನಮ್ಮ ಗ್ರಾಮಗಳಿಗೆ ಇಲ್ಲಿಯವರೆಗೂ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿಲ್ಲ. ಆದರೆ, ಚುನಾವಣೆ ಸಂದರ್ಭದಲ್ಲಿ ಬಂದು ಮತ ಕೇಳುವ ಮುಖಂಡರು ನಮ್ಮ ಕಡೆ ತಿರುಗಿಯೂ ನೋಡುವುದಿಲ್ಲ ಎಂದರು.
ಮನವಿಗೆ ಮಾನ್ಯತೆಯಿಲ್ಲ: ನಮ್ಮ ಕೆಲಸ ಕಾರ್ಯಗಳಿಗೆ ತಾಲ್ಲೂಕು ಕೇಂದ್ರಕ್ಕೆ ತೆರಳ ಬೇಕಾದರೆ ಗ್ರಾಮದಿಂದ 40ಕಿಲೋ ಮೀಟರ್ ದೂರವಾಗುತ್ತದೆ. ಆದರೆ, ನಮ್ಮ ಗ್ರಾಮದಿಂದ ಬೇಲೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಗುಂಡಿ ಬಿದ್ದು ತೀರಾ ಶೋಚನೀಯ ಸ್ಥಿತಿ ತಲುಪಿದೆ. ಈ ವಿಚಾರವಾಗಿ ಸ್ಥಳೀಯ ಶಾಸಕ ವೈ.ಎನ್. ರುದ್ರೇಶಗೌಡರಿಗೆ ಮತ್ತು ಸಂಸದರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸಾಕಷ್ಟು ಪ್ರತಿಭಟನೆಗಳನ್ನು ನಡೆಸಿ ಸ್ಥಳಕ್ಕೆ ಶಾಸಕ ರುದ್ರೇಶಗೌಡ ಹಾಗೂ ತಹಸೀಲ್ದಾರ್ ಅವರನ್ನು  ಸ್ಥಳಕ್ಕೆ ಕರೆಸಿ ಮನವಿ ಸಲ್ಲಿಸಿದರೂ  ಯಾರೂ ಗಮನ ಹರಿಸಿಲ್ಲ ಎಂದರು.
ನಮ್ಮ ಗ್ರಾಮಗಳಿಗೆ  ರಸ್ತೆ ಸಂಪರ್ಕ ಕಲ್ಪಿಸಲು ವಿಫಲವಾಗುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಮತ್ತು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಈ ಭಾಗದ ಮತದಾರರು ಯಾರೂ ಮತದಾನದಲ್ಲಿ ಭಾಗವಹಿಸದಂತೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಬಂಧಪಟ್ಟ ಸರ್ಕಾರ ಮತ್ತು ಸರ್ಕಾರಿ ಅಧಿಕಾರಿಗಳು ತಮ್ಮ ಮನವಿಗೆ ಸ್ಪಂದಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.