ಕೆಪಿಎಸ್ಸಿ ರ್ಯಾಂಕ್
ಹಾಸನ: ಹೊಳೆನರಸೀಪುರ ತಾಲೂಕು ಕೆರೆಗೋಡು ಗ್ರಾಮದ ಡಾ.ಕೆ.ಜೆ ಕಾಂತರಾಜು ಅವರು 2011ನೇ ಸಾಲಿನ ಕೆ.ಎ.ಎಸ್ ಪರೀಕ್ಷೆಯಲ್ಲಿ ಮೊದಲನೆಯ ಪ್ರಯತ್ನದಲ್ಲೇ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದು ಸಾಮಾನ್ಯ ವರ್ಗದಲ್ಲಿ ಉಪವಿಭಾಗಾಧಿಕಾರಿ ಹುದ್ದೆಗೆ ಆಯ್ಕೆ ಪಡೆದುಕೊಂಡಿದ್ದಾರೆ. ಅವರು 10ನೇ ತರಗತಿಯವರೆಗೆ ಕೆರೆಗೋಡು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲೇ ಓದಿದ್ದಾರೆ. ಪ್ರಸ್ತುತವಾಗಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪಶುವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜಸೇವೆ ಬಡವರ ಮತ್ತು ನೊಂದವರ ಕಷ್ಟಗಳಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುತ್ತೇನೆ ಎಂದರು. ನನ್ನ ಯಶಸ್ಸಿಗೆ ತಂದೆ ಜವರಯ್ಯ, ತಾಯಿ ಅಕ್ಕಯ್ಯಮ್ಮ, ಗುರುಗಳು, ಸಹೋದರಾ, ಸಹೋದರಿ ಮತ್ತು ಸ್ನೇಹಿತರಾದ ಕೃಷ್ಣಾ ರೆಡ್ಡಿ ಮತ್ತು ನನ್ನ ಬಳಗದವರ ಪ್ರೀತಿ ವಿಶ್ವಾಸಗಳೇ ನೆರವಾಗಿದ್ದು ಎಂದು ಸ್ಮರಿಸುತ್ತಾರೆ.
ಬಾಬೂಜಿ ಜಯಂತಿ
ಮೈಸೂರು: ಜಿಲ್ಲಾಡಳಿತ, ಜಿಪಂ, ಮೈಸೂರು ನಗರಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏ. 5ರ ಬೆಳಗ್ಗೆ 9.30ಕ್ಕೆ ರಾಷ್ಟ್ರನಾಯಕ ಡಾ. ಬಾಬು ಜಗಜೀನವರಾಂ 107ನೇ ಜನ್ಮದಿನಾಚರಣೆ ಅಂಗವಾಗಿ ರೇಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಡಾ. ಬಾಬು ಪತ್ರಿಮೆಗೆ ಮಾಲಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ. ಶಿಖಾ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಮೈಸೂರು: ಭಾರತೀಯ ಕ್ರೀಡಾ ಪ್ರಾಧಿಕಾರ ಹಾಗೂ ಪಾಟಿಯಾಲದ ನೇತಾಜಿ ಸುಭಾಷ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಸ್ಪೋರ್ಟ್ಸ್ ವತಿಯಿಂದ ಮೇ 15 ರಿಂದ ಜೂ. 24ರವರೆಗೆ ವಿವಿಧ ರಾಜ್ಯಗಳಲ್ಲಿ ಆರು ವಾರಗಳ ಕಾಲ ನಡೆಸುವ ವಿವಿಧ ಕ್ರೀಡಾ ಸರ್ಟಿಫಿಕೆಟ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದೆ. ಪ್ರವೇಶ ಇಚ್ಛಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವೆಬ್ಸೈಟ್ ಢಿಢಿಢಿ.ಟಿಡಟ್ಝಿಡ.್ಟ್ಠ್ಜನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಕೋರ್ಸ್ ಶುಲ್ಕ ರು. 14,150 ನಿಗದಿಪಡಿಸಿದ್ದು, ಈ ಮೊತ್ತದಲ್ಲಿ ವಸತಿ, ಊಟ, ಮತ್ತಿತ್ತರೆ ವೆಚ್ಚಗಳು ಅಡಕಗೊಂಡಿರುತ್ತವೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ಇವರನ್ನು ಖುದ್ದಾಗಿ ಅಥವಾ ದೂ. 2564179 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

