ಹಾಸನ

ನಾಗರಾಜ್ ಅಂತಿಮ ದರ್ಶನ ಪಡೆದ ಸಿಎಂ

Published On :


ಮೈಸೂರು: ಆತ್ಮಹತ್ಯೆಗೆ ಶರಣಾದ ಹಿರಿಯ ಸಹಕಾರಿ ಧುರೀಣ ಪಿ.ನಾಗರಾಜ್ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭೇಟಿ ನೀಡಿ, ಅಂತಿಮ ದರ್ಶನ ಪಡೆದರು. ಅಲ್ಲದೇ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಸಹಕಾರಿ ಧುರೀಣರಾಗಿದ್ದ ನಾಗರಾಜ್ ಅವರು ಪಕ್ಷದ ಹಿರಿಯ ಮುಖಂಡರಲ್ಲಿ ಒಬ್ಬರು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್, ಸಹಕಾರ ಸಚಿವ ಎಚ್.ಎಸ್. ಮಹದೇವ ಪ್ರಸಾದ್, ಶಾಸಕರಾದ ತನ್ವೀರ್ಸೇಠ್, ವಾಸು, ಎಂ.ಕೆ. ಸೋಮಶೇಖರ್, ಸಂದೇಶ್ ನಾಗರಾಜ್, ಆರ್.ಧರ್ಮಸೇನ, ಮಾಜಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ಸಿ.ದಾಸೇಗೌಡ, ಮುಖಂಡರಾದ ಸಿ. ಬಸವೇಗೌಡ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಮಂದಿ ಮೃತರ ಅಂತಿಮ ದರ್ಶನ ಪಡೆದರು.
ಮೃತರ ಅಂತ್ಯಕ್ರಿಯೆ ಚಾಮುಂಡಿಬೆಟ್ಟದ ತಪ್ಪಲಿನ ಹರಿಶ್ಚಂದ್ರ ಘಾಟ್ನಲ್ಲಿ ಶುಕ್ರವಾರ ಮಧ್ಯಾಹ್ನ ನೆರವೇರಿತು. ಸಿದ್ಧಾರ್ಥನಗರದ ಮನೆಯಿಂದ ಹರಿಶ್ಚಂದ್ರಘಾಟ್ವರೆಗೆ ಮೆರವಣಿಗೆ ನಡೆಸಲಾಯಿತು. ಪಿ. ನಾಗರಾಜ್ ಅವರ ನಿಧನಕ್ಕೆ ಸಂಸದ ಎಚ್.ವಿಶ್ವನಾಥ್, ಕಾಂಗ್ರೆಸ್ ಮುಖಂಡರಾದ ಎಚ್.ಎ. ವೆಂಕಟೇಶ್, ವಿಕ್ರಾಂತ್ ಪಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ.
ಸಂತಾಪ ಸೂಚಕ ಸಭೆ: ಪಿ.ನಾಗರಾಜ್ ಅವರ ನಿಧನದ ಹಿನ್ನೆಲೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಸಂತಾಪ ಸೂಚಕ ಸಭೆ ನಡೆಸಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ವಿ. ರಾಜೀವ್ ಮಾತನಾಡಿದರು. ಉಪಾಧ್ಯಕ್ಷ ಬಿ. ಮಹದೇವಸ್ವಾಮಿ, ನಿರ್ದೇಶಕರಾದ ಬಿ.ಎನ್. ಪಾರ್ಥಸಾರಥಿ, ನಾರಾಯಣಸ್ವಾಮಿ, ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ಬೃಹದಾಂಬ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.