ಹಾಸನ

ಮತ ಜಾಗೃತಿ ಜಾಥಾ

Published On :

ಅರಸೀಕೆರೆ: ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿಯು ಇತ್ತೀಚೆಗೆ ತಾಲೂಕಿನಲ್ಲಿ  ಮತದಾರರ ಜಾಗೃತಿ ಜಾಥಾವನ್ನು ವಿಶೇಷವಾಗಿ ಏರ್ಪಡಿಸಲಾಗಿತ್ತು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. ತಾಲೂಕು ನೋಡೆಲ್ ಅಧಿಕಾರಿ ಹಾಗೂ ಸಹಾಯಕ ಕಾರ್ಯದರ್ಶಿ, ತಾಲೂಕು ಪಂಚಾಯ್ತಿಯ ಮಂಜುನಾಥ್ ಜಾಥಾಕ್ಕೆ ಚಾಲನೆ ನೀಡಿದರು. ಸುಮಾರು 350 ವಿದ್ಯಾರ್ಥಿಗಳು ಈ ಪ್ರತಿಜ್ಞಾವಿಧಿಯಲ್ಲಿ ಪಾಲ್ಗೊಂಡಿದ್ದರು.
ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ತಾಲೂಕಿನ ನೋಡೆಲ್ ಅಧಿಕಾರಿ ಹಾಗೂ ಸಹಾಯಕ ಯೋಜನಾಧಿಕಾರಿ ಟಿ.ಶಿವಣ್ಣ, ಸ್ವೀಪ್ ಸಮಿತಿ ಸದಸ್ಯ ಹಾಗೂ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಕೃಷ್ಣಪ್ಪ, ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ .ಎನ್. ರೇವಣ್ಣ, ಹಿರಿಯ ನಾಗರಿಕ ಗಂಗಾಧರ್ ಮೊದಲಿಯಾರ್, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್, ಗಂಡಸಿ, ಹೆಗ್ಗಟ್ಟ, ಲಾಳನಕೆರೆ, ಚಗಚಗೆರೆ, ಬಾಗೀವಾಳು, ಬಾಗೇಶ್ವರ, ರಂಗಪುರ, ಕೆಂಕೆರೆ, ಯಡವನಹಳ್ಳಿ ಪಿಡಿಒಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.