ಹಾಸನ

ಪ್ರಜಾಪ್ರಭುತ್ವದ ಭದ್ರತೆಗೆ ಎಲ್ಲರೂ ಮತ ಚಲಾಯಿಸಿ

Published On :

ಅರಸೀಕೆರೆ: ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು ಹಾಗೂ ಕರ್ತವ್ಯವಾಗಿದ್ದು,  ಪ್ರಜಾಪ್ರಭುತ್ವದ ಭದ್ರಬುನಾದಿಗೆ ಪ್ರತಿಯೊಬ್ಬರೂ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಬೇಕೆಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಮೂರ್ತಿ ಕರೆ ನೀಡಿದರು. ತಾಲೂಕು ಆಡಳಿತದ ವತಿಯಿಂದ ಸಾರ್ವಜನಿಕರಿಗಾಗಿ ಮತದಾನದ ಅರಿವು ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಪಟ್ಟಣದ ತಾಲೂಕು ಕಚೇರಿ ಆವರಣದಿಂದ ಕಂತೇನಹಳ್ಳಿ ಬಡಾವಣೆಯವರೆಗೆ ಜಾಥಾ ನಡೆಯಿತು. ಜಾಥಾದಲ್ಲಿ ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ, ತಾಲ್ಲೂಕು ಸಮಾಜ ಕಲ್ಯಾಣಾಇಲಾಖೆಯ ರಾಜೇಂದ್ರ, ಕಾಶೀನಾಥ್ ಇನ್ನಿತರ ಅಧಿಕಾರಿಗಳು ಇದ್ದರು.     
ಅಸಮಾಧಾನ: ಈ ಕಾರ್ಯಕ್ರಮಕ್ಕೆ ಕೆಲವು ಅಧಿಕಾರಿಗಳು ಗೈರು ಹಾಜರಾಗಿದ್ದು ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿತ್ತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.