ಹಾಸನ

'ಸಮಾಜ ತಿದ್ದುವಲ್ಲಿ ನಾಟಕಗಳ ಪಾತ್ರ ಮಹತ್ವದ್ದು'

Published On :

ಚನ್ನರಾಯಪಟ್ಟಣ: ನಾಟಕಗಳು ಸಮಾಜ ತಿದ್ದುವಲ್ಲಿ ಮಹತ್ತರ ಪಾತ್ರ ವಹಿಸಿ ಜನತೆಯ ಮನಸ್ಸಿಗೆ ಮುದ ನೀಡುತ್ತವೆ ಎಂದು ಸಮಾಜ ಸೇವಕ ಆ.ಕ. ರಾಜೇಗೌಡ ತಿಳಿಸಿದರು.
ಪಟ್ಟಣದ ಮಾಧ್ಯಮಿಕ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತುಜನಪದ ರಂಗಮಾಧ್ಯಮ ಏರ್ಪಡಿಸಿದ್ದ ನಾಟಕೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ ನಾಟಕಗಳು ಉತ್ತಮ ಸಮಾಜ ನಿರ್ಮಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ ಎಂದರು. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ನಾಟಕಗಳ ರಚನೆ ಹಾಗೂ ಅವುಗಳ ಪ್ರದರ್ಶನವನ್ನು ಸಾಮಾಜಿಕ ಅರಿವು ಮೂಡಿಸುವ ಕಾರ್ಯಕ್ರಮವಾಗಿವೆ ಎಂದರು. ಜನಪದ ರಂಗಮಾದ್ಯಮ ಮಾಧ್ಯಮ ಅಧ್ಯಕ್ಷ ಚಂದ್ರು ಕಾಳೇನಹಳ್ಳಿ,  ಪರಿಸರ ಪ್ರೇಮಿ ಅಶೋಕ್, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸಿದ್ದೇಗೌಡ, ಸಮಾಜ ಸೇವಕ ಪ್ರಕಾಶ್ ಜೈನ್, ನಾರಾಯಣ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.