ಹಾಸನ

'ಕಾಂಗ್ರೆಸ್ ಮುಗಿಸುವ ಜೆಡಿಎಸ್ ಸಂಚು ವಿಫಲ'

Published On :

ಹಾಸನ:  ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಜೆಡಿಎಸ್ ಮಾಡಿದ್ದ ಸಂಚು ಹಿಂದೆಲ್ಲಾ ವಿಫಲವಾಗಿವೆ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರಿನಲ್ಲಿ ಕಾಂಗ್ರೆಸನ್ನು ಮುಗಿಸಲು ಜೆಡಿಎಸ್ನವರು ಹೊರಟಿದ್ದರು. ಆಗ ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ 252 ಓಟುಗಳ ಅಂತರದಲ್ಲಿ ಜಯಗಳಿಸಿದ್ದೆವು. ಹಾರ್ಟ್ ಹಟ್ಯಾಕ್ ಆದ್ರೂ ಸಾಯ್ತಾರೆ, ವಾಂತಿ- ಭೇದಿಯಾದ್ರೂ ಜನ ಸಾಯ್ತಾರೆ. ಅಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಒಳಗೆ ಬಂದರು, ಶಿವಬಸಪ್ಪ ಹೊರಗೆ ಹೋದರು ಎಂದು ಟೀಕಿಸಿದರು. ಕೆಜೆಪಿಯಿಂದ ಬಿಜೆಪಿಗೆ ವಾಪಸ್ ಬಂದಿರುವ ಯಡಿಯೂರಪ್ಪ ಚುನಾವಣೆಯ ನಂತರ ಬಿಜೆಪಿನಲ್ಲಿ ಇರೋದಿಲ್ಲ. ಇದನ್ನು ವೀರಶೈವರು ಅರ್ಥ ಮಾಡಿಕೊಳ್ಳಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.