ಮೊರಾರ್ಜಿ ಶಾಲೆಯ ಮಕ್ಕಳಿಗೆ ಪ್ರೋತ್ಸಾಹಧನ
ಹಾಸನ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿಯಲ್ಲಿ ಶೇ. 60 ರಿಂದ ಶೇ. 70ರವರೆಗೆ ಅಂಕಗಳಿಸಿದ ಮಕ್ಕಳಿಗೆ ರು. 7,000 ಹಾಗೂ ಶೇ. 75ಗಿಂತ ಮೇಲ್ಪಟ್ಟು ಅಂಕಗಳಿಸಿದ ಮಕ್ಕಳಿಗೆ ರು. 15,000 ಪ್ರೋತ್ಸಾಹ ಧನ ನೀಡುವುದರ ಮೂಲಕ ಬಡಮಕ್ಕಳಿಗೆ ಪರೀಕ್ಷಾ ಮಂಡಳಿ ಪ್ರೋತ್ಸಾಹ ನೀಡುತ್ತಿದೆ. ಹಾಸನ ತಾಲ್ಲೂಕಿನ ಕಂದಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಾಮಾನ್ಯ ವರ್ಗದ ಶಾಲೆಯಾಗಿದ್ದು, 2013ರ ಏಪ್ರಿಲ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪರಿಶಿಷ್ಟ ಜಾತಿಯ 12 ವಿದ್ಯಾರ್ಥಿಗಳು ಪರೀಕ್ಷೆ ಬರೆದು 10 ವಿದ್ಯಾರ್ಥ್ಥಿಗಳು ರು. 7,000 ಪ್ರೋತ್ಸಾಹ ಧನ ಮತ್ತು 2 ವಿದ್ಯಾರ್ಥಿಗಳು ರು. 15,000 ಪ್ರೋತ್ಸಾಹ ಧನ ಪಡೆದಿರುತ್ತಾರೆ. ಶಾಲೆಯಲ್ಲಿ ವ್ಯಾಸಂಗ ಮಾಡಿದ 12 ವಿದ್ಯಾರ್ಥಿಗಳ ಒಟ್ಟು ಪ್ರೋತ್ಸಾಹ ಧನ ರು. 1,00,000 ಆಗಿದೆ.
ಪ್ರೋತ್ಸಾಹ ಧನ ಪಡೆದ ಮಕ್ಕಳಿಗೆ ಕಳೆದ 25 ರಂದು ನಡೆದ ಪೋಷಕರ ಸಭೆಯಲ್ಲಿ ಶಾಲೆಯ ಪ್ರಾಂಶುಪಾಲ ಜೆ.ಬಿ. ತಮ್ಮಣ್ಣಗೌಡ ಅವರು ಪ್ರೋತ್ಸಾಹ ಧನದ ಚೆಕ್ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

