ದೇಶದ ಹಿತಕ್ಕಾಗಿ ಬಿಎಸ್ಪಿ ಬೆಂಬಲಿಸಿ
ಕ.ಪ್ರ.ವಾರ್ತೆ, ಹಾಸನ, ಮಾ. 30
ಲೋಕಸಭೆ ಚುನಾವಣೆಯಲ್ಲಿ ದೇಶದ ಹಿತ ರಕ್ಷಣೆಗಾಗಿ ದಲಿತರು, ರೈತರು ಬಿಎಸ್ಪಿಯನ್ನು ಬೆಂಬಲಿಸಬೇಕೆಂದು ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 40ರಿಂದ 45 ಸೀಟಗಳನ್ನು ಪಕ್ಷ ಗೆಲ್ಲಲಿದ್ದು, ರಾಜ್ಯದಲ್ಲಿ ಎರಡರಿಂದ ಮೂರು ಸ್ಥಾನಗಳು ಬರಲಿದೆ. ರಾಜ್ಯದಲ್ಲಿ ಚಾಮರಾಜನಗರ, ಬೀದರ್, ಚಿಕ್ಕೋಡಿಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಮತಗಳು ಕಳೆದ ಚುನಾವಣೆಯಲ್ಲಿ ಬಂದಿದೆ. ಅಷ್ಟೇ ಅಲ್ಲದೆ ಕಳೆದ ಚುನಾವಣೆಯಲ್ಲಿ ಕೆಲವು ಕಡೆಗಳಲ್ಲಿ ಕಡಿಮೆ ಅಂತರದಲ್ಲಿ ಪಕ್ಷದ ಅಭ್ಯರ್ಥಿಗಳು ಸೋಲನ್ನು ಕಂಡಿದ್ದಾರೆ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಶೇ.2.76ರಷ್ಟು ಪಕ್ಷಕ್ಕೆ ಮತದಾನವಾಗಿತ್ತು. ಅದು ಈ ಬಾರಿ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಬಾರಿ 28 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಲ್ಲಿ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಜೊತೆಗೆ ಎಲ್ಲಾ ಸಮುದಾಯದವರಿಗೆ ಸಮಾನವಾಗಿ ಟಿಕೆಟ್ ನೀಡಲಾಗಿದೆ ಎಂದರು.
ಮಾಧ್ಯಮಗಳು ಬಿಂಬಿಸುತ್ತಿವೆ: ದೊಡ್ಡ ಮಾಧ್ಯಮಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೆಚ್ಚಾಗಿ ಬಿಂಬಿಸಲಾಗುತ್ತಿದೆ. ಕಾಂಗ್ರೆಸ್ನವರು 4 ಎಂಪಿ ಮತ್ತು 4 ಎಂಎಲ್ಎ ಚುನಾವಣೆಯ ಸಂದರ್ಭದಲ್ಲಿ ನಾನಾ ಪ್ರಣಾಳಿಕೆಯನ್ನು ನೀಡಿದ್ದಾರೆ. ಆದರೆ ಆ ಪ್ರಣಾಳಿಕೆಯಲ್ಲಿ ಶೇ.1ರಷ್ಟು ಸಹ ಅನುಷ್ಠಾನಗೊಂಡಿಲ್ಲ. ಯಾರು ಏನೇ ಮಾಡಿದರೂ ಸಹ ರಾಷ್ಟ್ರದಲ್ಲಿ ಎನ್ಡಿಎ ಮತ್ತು ಯುಪಿಎ ಸರ್ಕಾರ ಅಧಿಕಾರಕ್ಕೆ ಬರೋದಿಲ್ಲ ಎಂದರು.
ಬಿಎಸ್ಪಿ ಬೆಂಬಲಿಸಿ: ಹಾಸನ ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿ ಎ.ಪಿ.ಅಹಮದ್ ಅವರನ್ನು ಕಣಕ್ಕಿಳಿಸಿದ್ದು, ಕ್ಷೇತ್ರದ ಜನತೆ ಹೆಚ್ಚಿನ ಮತಗಳನ್ನು ನೀಡಿ ಜಯಶೀಲರನ್ನಾಗಿ ಮಾಡಬೇಕು. ದಲಿತರು, ರೈತರು ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಎಸ್ಪಿ ಮುಖಂಡ ಮಹೇಶ್, ಪಕ್ಷದ ಅಭ್ಯರ್ಥಿ ಎ.ಪಿ. ಅಹಮದ್, ಜಿಲ್ಲಾಧ್ಯಕ್ಷ ರಾಜೇಶ್, ಶಿವಣ್ಣ, ಪ್ರಕಾಶ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

