ಹಾಸನ

ವೀರಾಂಜನೇಯ ಯುವಕ ಸಂಘದಿಂದ ಕ್ರೀಡಾ ಸಾಮಗ್ರಿ ವಿತರಣೆ

Published On :

ಚನ್ನರಾಯಪಟ್ಟಣ: ತಾಲ್ಲೂಕು ಮಟ್ಟದ ಕ್ರೀಡಾ ಕೂಟ ಮತ್ತು ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಪಟ್ಟಣದ ಸಿವಿಕೆಎಲ್ ಸ್ವಯಂ ಸೇವಾ ಸಂಸ್ಥೆ ಮತ್ತು ಶ್ರೀ ವೀರಾಂಜನೇಯ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ವೈದ್ಯ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜು ಆವರಣದಲ್ಲಿ ನಡೆಯಿತು.
ಉದ್ಘಾಟನೆ ನೆರವೇರಿಸಿದ ಸಮಾಜ ಸೇವಕ ಬಲರಾಂ ಮಾತನಾಡಿ, ಗ್ರಾಮೀಣ ಕ್ರೀಡೆಗಳು ನಶಿಸಿಹೋಗುತ್ತಿವೆ ಆದರೆ ಇಂತಹ ಕ್ರೀಡಾ ಕೂಟಗಳು ನಡೆಸಿ ಜನರಲ್ಲಿ ತಿಳುವಳಿಕೆ ನೀಡಬೇಕು. ಹಿಂದಿನ ಕಾಲದಲ್ಲಿ ಕಬ್ಬಡಿ, ಕೋಕೋ, ಕೆಸರುಗದ್ದೆ ಓಟ, ಬಂಡಿಸವಾರಿ, ಹಗ್ಗ ಜಗ್ಗಾಟ ಇನ್ನು ಮುಂತಾದ ಕ್ರೀಡೆಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿದ್ದವು ಹಾಗೂ ಪಟ್ಟಣ ಪ್ರದೇಶದಲ್ಲಿಯೂ ಸಹ ನಡೆಯುತ್ತಿದ್ದವು. ಆದರೆ ಇಂದಿನ ಕಾಲದಲ್ಲಿ ಇವುಗಳ ಬಗ್ಗೆ ಯಾವುದೇ ಪ್ರೋತ್ಸಾಹ ಸಿಗದೆ ನಶಿಸಿಹೋಗುತ್ತಿವೆ ಎಂದರು.
ಕ್ರೀಡಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಪ್ರಾಂಶುಪಾಲ ಅರುಣ್ ಕುಮಾರ್, ಇಂತಹ ಸಂಘ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ನಶಿಸಿಹೋಗುತ್ತಿರುವ ಗ್ರಾಮೀಣ ಕ್ರೀಡೆಗೆ ಮೆರಗು ನೀಡಿ ಪ್ರೋತ್ಸಾಹ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ಯುವಕರ ಪಾತ್ರ ಹೆಚ್ಚಾಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ದೇವೇಗೌಡ, ಸಂಘದ ಸದಸ್ಯ ರವೀಶ್, ಕಾರ್ಯದರ್ಶಿ ಲೋಹಿತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.