ಸಾಹಿತಿ ಪ. ನಾಗರಾಜಯ್ಯಗೆ ಶ್ರದ್ಧಾಂಜಲಿ
ಎಚ್.ಡಿ. ಕೋಟೆ: ಹಿರಿಯ ಸಾಹಿತಿ ಪಂಡಿತ ಪ. ನಾಗರಾಜಯ್ಯ ನಿಧನದಿಂದ ತಾಲೂಕಿಗೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಾಹಿತಿ ಎಂ.ಎನ್. ರವಿಶಂಕರ್ ಹೇಳಿದರು.
ಪಟ್ಟಣದ ಬಾಪೂಜಿ ವೃತ್ತದ ಬಳಿ ಕಸಾಪ, ಕಸ್ತೂರಿ ಜನನಿ ಸಂಸ್ಥೆ, ಲಯನ್ಸ್ ಕ್ಲಬ್ ಮತ್ತು ಇತರೆ ಕನ್ನಡ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಪಂಪನ ಆದಿಪುರಾಣ ದೀಪಿಕೆ, ರನ್ನನ ಅಜಿತನಾಥ ಪುರಾಣ ಸೇರಿದಂತೆ ನೂರಕ್ಕೂ ಹೆಚ್ಚು ಕೃತಿಗಳು ಮತ್ತು ಸಾವಿರಾರು ಲೇಖನಗಳನ್ನು ಬರೆದಿದ್ದರು. 30 ವರ್ಷಕ್ಕೂ ಹೆಚ್ಚು ಕಾಲ ಹಾಸನ ಮತ್ತು ಮೈಸೂರಿನ ಜಿಲ್ಲಾ ಕಸಾಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿದರು.
ಕಸಾಪ ಗೌರವ ಕಾರ್ಯದರ್ಶಿ ಕನ್ನಡ ಪ್ರಮೋದ್ ಮಾತನಾಡಿ, ನಾಗರಾಜಯ್ಯ ನಮ್ಮ ತಾಲ್ಲೂಕಿನವರೇ ಆದರೂ ಅವರ ಬಗ್ಗೆ ಹೆಚ್ಚು ತಿಳಿದುಕೊಂಡಿರಲಿಲ್ಲ. ಆದರೆ ಕಳೆದ ಜೂನ್ ತಿಂಗಳಲ್ಲಿ ನಡೆದ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಮಾಡಿದ್ದರಿಂದ ನಮಗೆ ತೃಪ್ತಿ ಸಿಕ್ಕಿತು. ಹಾಗೇ ಸಮ್ಮೇಳನದಲ್ಲಿ ಉತ್ಸಾಹದಿಂದ ದಿನಪೂರ್ತಿ ಭಾಗವಹಿಸಿ ಯುವಕರಿಗೆ ಸ್ಫೂರ್ತಿಯಾಗಿದ್ದರು ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಆರ್. ಮಹೇಶ್, ಕಸ್ತೂರಿ ಜನನಿ ಸಂಸ್ಥೆ ಅಧ್ಯಕ್ಷ ಕುಮಾರಸ್ವಾಮಿ, ಲಯನ್ಸ್ ಕ್ಲಬ್ ಅಧ್ಯಕ್ಷ ಬಸವರಾಜು, ಸತೀಶ್ ಬಿ. ಆರಾಧ್ಯ, ಪತ್ರಕರ್ತರ ಸಂಘದ ಅಧ್ಯಕ್ಷ ಮಂಜುಕೋಟೆ, ಕನ್ನಡಸೇನೆ ಅಧ್ಯಕ್ಷ ಕುಮಾರ್, ಛಾಯಾಗ್ರಾಹಕರ ಸಂಘದ ಅಧ್ಯಕ್ಷ ನಂದಕುಮಾರ್, ಸೋಮು, ಎಸ್.ಪಿ. ಪ್ರಕಾಶ್ ಡಿ. ಸುರೇಂದ್ರ, ಚಾ. ನಂಜುಂಡಮೂರ್ತಿ, ನಾರಾಯಣ್ಗೌಡ, ರಾಜುಸಾಗರ್, ಆನಂದ, ಆಟೋರಮೇಶ್, ನವೀನ್, ವೆಂಕಟೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

