ಹಾಸನ

ಗುಡಿಸಲಿಗೆ ಬೆಂಕಿ: ಸ್ಥಳಕ್ಕೆ ಎಸಿ ಭೇಟಿ

Published On :

ಜಾವಗಲ್: ಜಿಲ್ಲಾ ಉಪ ವಿಭಾಗಾಧಿಕಾರಿ ಶರತ್ ಮತ್ತಿತರೆ ಅಧಿಕಾರಿಗಳು ಜಾವಗಲ್ ಖಲಂದರ್ ನಗರದ ಕೆಎಚ್‌ಬಿ ಬಡಾವಣೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದ ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಭಸ್ಮವಾಗಿದ್ದ ಸ್ಥಳಕ್ಕೆ ಇತ್ತೀಚೆಗೆ ಭೇಟಿ ನೀಡಿ ಪರಿಶೀಲಿಸಿದರು.
ತಹಸೀಲ್ದಾರ್ ನಟರಾಜ್, ಉಪ ತಹಸೀಲ್ದಾರ್ ಪೆರುಮಾಳ್, ಕಂದಾಯಾಧಿಕಾರಿ ಮುದ್ದುವೀರಯ್ಯ ಇದ್ದರು.
ನಂತರ ದರ್ಗಾ, ಲಕ್ಷ್ಮೀನರಸಿಂಹಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ದೇಗುಲ ವೀಕ್ಷಿಸಿ ಜೀರ್ಣೋದ್ಧಾರ ಕಾಮಗಾರಿ ಪರಿಶೀಲಿಸಿದರು.  ಸುದ್ದಿಗಾರರು ದೇಗುಲದ ಸುತ್ತಮುತ್ತ ಪ್ರವಾಸೋದ್ಯಮ ಇಲಾಖೆ  ವತಿಯಿಂದ ಕೈಗೊಂಡಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಗಮನ ಹರಿಸಿದಾಗ, ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಲು ತಹಶೀಲ್ದಾರ್‌ಗೆ ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.