ಆಯುಕ್ತರಿಗೆ ಕಿರುಕುಳ ನಿಲ್ಲಿಸದಿದ್ದರೆ ಉಗ್ರ ಹೋರಾಟ: ಬಿಎಸ್ಪಿ ಎಚ್ಚರಿಕೆ
ಹಾಸನ: ನಗರದ ಸ್ವಚ್ಛತೆ ಮತ್ತು ಜನತೆಯ ಆರೋಗ್ಯದ ಬಗ್ಗೆ ಮೊದಲ ಆದ್ಯತೆ ನೀಡಿ ನಾಗರಿಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿರುವ ನಗರಸಭೆ ಆಯುಕ್ತರಿಗೆ ಜೆಡಿಎಸ್ ಪ್ರತಿನಿಧಿಗಳು ಉದ್ದೇಶ ಪೂರ್ವಕವಾಗಿ ಕಿರುಕುಳ ನೀಡುತ್ತಿದ್ದು, ಇದನ್ನು ನಿಲ್ಲಿಸದಿದ್ದರೆ ಬಿಎಸ್ಪಿ ವತಿಯಿಂದ ಉಗ್ರ ಹೋರಾಟ ಕೈಗೊಳ್ಳುವುದಾಗಿ ಬಿಎಸ್ಪಿ ಜಿಲ್ಲಾ ಕಾರ್ಯದರ್ಶಿ ಸ್ಟೀವನ್ ಪ್ರಕಾಶ್ ಎಚ್ಚರಿಕೆ ನೀಡಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುಕ್ತರು ಅಧಿಕಾರ ವಹಿಸಿಕೊಂಡ ದಿನದಿಂದಲೂ ಜನಪರ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ನಗರಸಭೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಸುಗಮವಾಗಿ ನಡೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ನೌಕರರು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಸೂಕ್ತ ಕ್ರಮಗಳನ್ನು ಕೈಗೊಂಡಿರುವ ಆಯುಕ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಸತ್ಯಮಂಗಲ ಗ್ರಾಮ ಪಂಚಾಯ್ತಿಗೆ ಸೇರಿರುವ ಬೀರನಹಳ್ಳಿ ಕೆರೆಗೆ ನಗರಸಭೆಯಿಂದ ರು. 6.5 ಲಕ್ಷ ವೆಚ್ಚದಲ್ಲಿ ಮತ್ತು ಆಟಿಕೆಗಳನ್ನು ಆಳವಡಿಸಿ ಅಕ್ರಮ ಎಸಗಿದ್ದಾರೆ. ಕುವೆಂಪು ನಗರದ 2 ಪಾರ್ಕುಗಳಿಗೆ ತಲಾ ರು. 6 ಲಕ್ಷದಂತೆ ರು.12 ಲಕ್ಷ
ಆಟಿಕೆ ಸಾಮಗ್ರಿ ಅಳವಡಿಸಿದ್ದಾರೆ. ರು.5 ಲಕ್ಷಗಿಂತ ಕಾಮಗಾರಿಗೆ
ಇ-ಪ್ರಕೂರ್‌ಮೆಂಟ್‌ನಲ್ಲಿ ಟೆಂಡರ್ ಮುಖಾಂತರ ಮಾಡದೆ ಹಾಗೂ ದರಗಳನ್ನು ಪ್ರಾಧಿಕಾರದಿಂದ ಅನುಮತಿ ಪಡೆಯದೆ ನಿಗದಿಪಡಿಸಿ ನಗರಸಭೆಗೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿದರು.
ಈ ನಿಟ್ಟಿನಲ್ಲಿ ನಗರಸಭೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದಂತಹ ಅಕ್ರಮಗಳಿಗೆ ತಡೆಯೊಡ್ಡಿದ್ದರಿಂದ ಬೇಸತ್ತ ಜೆಡಿಎಸ್ ನಾಯಕರು ಹಾಗೂ ಜನಪ್ರತಿನಿಧಿಗಳು ಆಯುಕ್ತರ ವಿರದ್ಧ ಸುಳ್ಳು ಆಪಾದನೆ ಮಾಡುತ್ತಿದ್ದಾರೆ ಹಾಗೂ ಕಿರುಕುಳ ನೀಡುತ್ತಿದ್ದಾರೆ. ಕೂಡಲೇ ಇದನ್ನು ನಿಲ್ಲಿಸದಿದ್ದರೆ ಈ ವಿರುದ್ಧ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲಾ ಸಂಯೋಜಕ ಎ.ಪಿ.ಅಹಮದ್, ಮುಕ್ತಾರ್ ಪಾಷ, ಎಸ್.ಮಲ್ಲಿಕ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

