'ಉತ್ತಮ ವ್ಯಾಸಂಗದಿಂದ ಉಜ್ವಲ ಭವಿಷ್ಯ ಸಾಧ್ಯ'
ಬಾಗೇಪಲ್ಲಿ: ಉತ್ತಮ ವ್ಯಾಸಂಗದಿಂದ ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ನಂಜುಂಡಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಲ್ಲಿ ವಿದ್ಯಾರ್ಥಿಗಳು ಕಷ್ಟ ಪಟ್ಟು ವ್ಯಾಸಂಗ ಮಾಡುವುದಕ್ಕಿಂತ ಇಷ್ಟ ಪಟ್ಟು ವ್ಯಾಸಂಗ ಮಾಡುವುದನ್ನು ರೂಢಿಸಿಕೊಂಡಾಗ ಮಾತ್ರ ಶ್ರಮಕ್ಕೆ ಉತ್ತಮ ಪ್ರತಿಫಲ ಸಿಗುತ್ತದೆ. ಕೇವಲ ಪುಸ್ತಕಗಳನ್ನೇ ಓದುವ ಮೂಲಕ ಪುಸ್ತಕ ಬದನೆಕಾಯಿ ಆಗಬಾರದು. ವಿದ್ಯಾರ್ಥಿಗಳು ಪಠ್ಯ ಪುಸ್ತಕದ ಜೊತೆ ಜೊತೆಯಲ್ಲಿಯೇ ವಿವಿಧ ರೀತಿಯ ಪುಸ್ತಕಗಳನ್ನು ಓದುವವಂತಹ ಹವ್ಯಾಸವನ್ನು ಬೆಳೆಸಕೊಳ್ಳಬೇಕು.ಇದರ ಜೊತೆಗೆ ಕ್ರೀಡೆಗಳಲ್ಲಿಯೂ ಭಾಗವಹಿಸಬೇಕು ಎಂದರು.
ಪದವಿ ವಿದ್ಯಾಭ್ಯಾಸವೇ ಮುಂದಿನ ಜೀವನಕ್ಕೆ ಮಾರ್ಗದರ್ಶನ ಆಗಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಕಾಲಹರಣ ಮಾಡುವುದರಿಂದ, ದುಶ್ಚಟಗಳಿಗೆ ಬಲಿಯಾಗುವುದರಿಂದ ಇಡೀ ಜೀವನವೇ ವ್ಯರ್ಥವಾಗುತ್ತದೆ. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಟಿ.ವಿ, ಮೊಬೈಲ್ ಹಾಗೂ ಸಿನಿಮಾ ಮುಂತಾದ ಮಾಧ್ಯಮಗಳಿಂದ ದೂರ ಇರಬೇಕು. ಒಂದು ಸಲ ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವನವನ್ನು ಕೆಡಿಸಿಕೊಂಡರೆ ಪುನಃ ಅದನ್ನು ಸರಿಪಡಿಸಲು ಹರಸಾಹಸ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಸುಭಾಷ್ ಚಂದ್ರ , ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ನಿವೃತ್ತ ಸರ್ಕಾರಿ ಸಹಾಯಕ ಹಣಕಾಸು ನಿಯಂತ್ರಣಾಧಿಕಾರಿ ಎನ್.ಎಂ. ಕೃಷ್ಣಪ್ಪ ಮಾತನಾಡಿದರು. ನಂತರ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಡಾ.ಕೆ.ಎಂ.ನಯಾಜ್ ಅಹಮದ್, ಡಾ.ಬಿ.ಎನ್. ಪ್ರಭಾಕರ್, ಕೇಶವಮೂರ್ತಿ, ವೆಂಕಟರಾಮರೆಡ್ಡಿ, ಎಚ್.ನಂಜಪ್ಪ, ಮೋಹನ್, ಅಶ್ವತ್ಥನಾರಾಯಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

