ಹಾಸನ

ಎನ್‌ಟಿಆರ್ ಹೊಗಳಿದ ನಮೋ

Published On :

ಕೋಲಾರ: ಎನ್.ಟಿ. ರಾಮರಾಮ್ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ, ಇವರ ಜನಪರ ಯೋಜನೆಗಳನ್ನು ನಂತರ ಚಂದ್ರಬಾಬು ನಾಯ್ಡು ಮುಂದುವರೆಸಿಕೊಂಡು ಹೋಗುವ ಮೂಲಕ ಆಂಧ್ರ ಪ್ರದೇಶದ ಅಭಿವೃದ್ಧಿಗೆ ಶ್ರಮಿಸಿದ್ದು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಆಂಧ್ರ ಪ್ರದೇಶದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಲಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ತಿಳಿಸಿದರು.
ಕೋಲಾರ ಜಿಲ್ಲೆಯ ಗಡಿಯಂಚಿನಲ್ಲಿರುವ ಅಂದ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಪಟ್ಟಣದಲ್ಲಿ ಅವರು ಗುರುವಾರ ಬಿಜೆಪಿ ಮತ್ತು ತೆಲಗುದೇಶಂ ಅಭ್ಯರ್ಥಿಗಳ ಪರ ಬೃಹತ್ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಎನ್.ಟಿ.ಆರ್ ರಾಯಲ ಸೀಮೆಯ ಅಭಿವೃದ್ಧಿಗೆ ನೀಡಿದ್ದ ಕೊಡುಗೆಯನ್ನು ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಹಾಳು ಮಾಡಿದ್ದಾರೆ. ಆಂಧ್ರ ಜನತೆಯನ್ನು ಇಬ್ಬಾಗ ಮಾಡಿ ರಾಜಕೀಯ ಲಾಭ ಪಡೆಯಲು ಷಡ್ಯಂತ್ರ ನಡೆಸಿದ್ದು ಇವರಿಬ್ಬರಿಗೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕೆಂದು ಕರೆ ನೀಡಿದರು.
ರಾಯಲಸೀಮೆ ಭಾಗದಲ್ಲಿ ತರಕಾರಿ ಬೆಳೆಯುವ ರೈತನ ಹಿತ ಕಾಪಾಡುವಲ್ಲಿ  ಕೇಂದ್ರದ ಯುಪಿಎ ಸರ್ಕಾರ ವಿಫಲವಾಗಿದೆ. ಹಗರಣಗಳಲ್ಲಿ ಕಾಲ ಕಳೆದ ಕಾಂಗ್ರೆಸ್ ನೇತೃತ್ವ ಯುಪಿಎ ಸರ್ಕಾರ ಚುನಾವಣೆಯ ಸಂದರ್ಭದಲ್ಲಿ ಮೊಸಳೆ ಕಣ್ಣಿರು ಸುರಿಸುತ್ತಿದೆ ಎಂದು ಆರೋಪಿಸಿದರು.ನದಿ ಜೋಡಣೆ ಬಿಜೆಪಿಯ ಗುರಿಯಾಗಿದೆ. ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಪಾಲುದಾರ ಪಕ್ಷಗಳಾದ ಬಿಜೆಪಿ ಮತ್ತು ತೆಲುಗು ದೇಶಂ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗುವಂತೆ ಆಶೀರ್ವಾದ ಮಾಡಿದಲ್ಲಿ ಎನ್‌ಟಿಆರ್ ಮತ್ತು ವಾಜಪೇಯಿ ಅವರುಗಳ ಕನಸು ನನಸಾಗಿಸುವುದಾಗಿ ಹೇಳಿದರು.
ವೇದಿಕೆಯಲ್ಲಿ ಜನಸೇನಾ ಪಕ್ಷದ ಮುಖ್ಯಸ್ಥ ನಟ ಪವನ ಕಲ್ಯಾಣ್, ತೆಲಗುದೇಶಂ ಮುಖ್ಯಸ್ಥ ಚಂದ್ರಬಾಬುನಾಯ್ದು, ಬಿಜೆಪಿ ಹಿರಿಯ ಮುಖಂಡ ವೆಂಕಯ್ಯನಾಯ್ಡು, ಪ್ರಕಾಶ್ ಜಾವ್‌ಡೇಕರ್, ರಾಜಂಪೇಟ ಲೋಕಸಭೆ ಬಿಜೆಪಿ ಅಭ್ಯರ್ಥಿ ಪುರಂದರೇಶ್ವರಿ, ಮದನಪಲ್ಲಿ ವಿಧಾನಸಭೆ ಬಿಜೆಪಿ ಅಭ್ಯರ್ಥಿ ಚರ್ಲಪಲ್ಲಿ ನರಸಿಂಹರೆಡ್ಡಿ, ಪುಂಗನೂರು ತೆಲಗುದೇಶಂ ಅಭ್ಯರ್ಥಿ ವೆಂಕಟರಮಣ ರಾಜು, ತಂಬಾಳಪಲ್ಲಿ ತೆಲಗುದೇಶಂ ಅಭ್ಯರ್ಥಿ ಶಂಕರಯಾದವ್, ಯಲಹಂಕದಶಾಸಕ ಎಸ್.ಆರ್. ವಿಶ್ವನಾಥ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.