ಹಾಸನ

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂದಕ: ಸಂಚಾರಕ್ಕೆ ಕಂಟಕ

Published On :

ಅರಸೀಕೆರೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ-206ರಲ್ಲಿ ಕಳಪೆ ಕಾಮಗಾರಿಯಿಂದಾಗಿ ರಸ್ತೆಯ ಕೆಲವೆಡೆ ಕಂದಕಗಳು ನಿರ್ಮಾಣವಾಗಿದ್ದು, ಇದನ್ನು ಮುಚ್ಚದೆ ಹಾಗೇ ಬಿಟ್ಟಿರುವುದರಿಂದ ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಡಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ನಾಗರೀಕರ ಆಕ್ರೋಶಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದಾಗಿ ಪ್ರಯಾಣಿಕರು, ವಾಹನ ಸವಾರರು ಪ್ರಾಣ ಕಳೆದುಕೊಳ್ಳುವ  ಸ್ಥಿತಿ ಎದುರಾಗಿದ್ದು ಕೂಡಲೇ ರಾಷ್ಟ್ರೀಯ ಹೆದ್ದಾರಿಯಲ್ಲಾಗಿರುವ ಗುಂಡಿಗಳನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಬೇಕೆಂದು ಪಟ್ಟಣದ ನಾಗರಿಕರು ಹಾಗೂ ವಾಹನ ಚಾಲಕರು ತಾಲೂಕು ಆಡಳಿತವನ್ನು ಆಗ್ರಹಿಸಿದ್ದಾರೆ.
ಪಟ್ಟಣದ ಗುರುಸಿದ್ದರಾಮೇಶ್ವರ ಸಮುದಾಯ ಭವನ ಎದುರು ಬೆಂಗಳೂರು-ಹೊನ್ನಾವರ ರಾಹೆ-206 ರಲ್ಲಿ ಮಧ್ಯೆ ಹಾದು ಹೋಗಿರುವ ಒಳಚರಂಡಿ ಮೇಲ್ಸೇತುವೆ ಕುಸಿದಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಿದೆ.    ಮೇಲ್ಸೇತುವೆ ಮೇಲ್ಭಾಗದ ಕಾಂಕ್ರಿಟ್ ಕುಸಿದು ಹಲವು ತಿಂಗಳೇ ಕಳೆದಿವೆ. ವಾಹನ ಸಂಚಾರಕ್ಕೆ ಅಡಚಣೆ ಎದುರಾದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸಿಲ್ಲ.
ರಸ್ತೆ ದುರಸ್ತಿ ಮಾಡುವ ಬದಲು ಮೇಲ್ಭಾಗದಲ್ಲಿ ಕಲ್ಲುಗಳನ್ನು ಇಡುವ ಮೂಲಕ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ ಬಿಪಿಎಸ್ ಮೆಡಿಕಲ್ ಸ್ಟೋರ್ ಸಮೀಪ ಹಾಗೂ ಸರ್ಕಾರಿ ಪ್ರಾಥಮಿಕ ಶಾಲಾ ಮುಂಭಾಗ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಇದನ್ನು ದುರಸ್ತಿ ಪಡಿಸದೆ ಹಾಗೆಯೇ ಬಿಟ್ಟಿರುವುದರಿಂದ ದ್ವಿಚಕ್ರ ವಾಹನ ಸವಾರರು ರಾಷ್ಟೀಯ ಹೆದ್ದಾರಿಯಲ್ಲಿರುವ ಈ ಗುಂಡಿಗಳನ್ನು ಗಮನಿಸದೆ ಅಪಘಾತ ಸಂಭವಿಸಿ ಗಾಯಗೊಂಡಿರುವ ಅನೇಕ ಘಟನೆಗಳು ನಡೆದಿದ್ದು,  ಈ ಕೂಡಲೇ ಸಂಬಂಧಪಟ್ಟವರು ಪ್ರಯಾಣಿಕರ ಪ್ರಾಣ ರಕ್ಷಣೆಗೆ ಮುಂದಾಗಬೇಕು. ಇಲ್ಲದಿದ್ದಲ್ಲಿ ತಾಲೂಕು ಆಡಳಿತ ವಿರುದ್ಧ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ನಾಗರಿಕರು ಎಚ್ಚರಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.