ಹಾಸನ

ಕರವೇ ಆಟೋ ಘಟಕಕ್ಕೆ ಚಾಲನೆ

Published On :

ಹಾಸನ: ನಗರದ ನೂತನ ಬಸ್ ನಿಲ್ದಾಣದ ಎದುರು ಕರ್ನಾಟಕ ರಕ್ಷಣಾ ವೇದಿಕೆ ನಾಮಫಲಕವುಳ್ಳ ಆಟೋ ಘಟಕಕ್ಕೆ ಗುರುವಾರ ತಹಸೀಲ್ದಾರ್ ಮಂಜುನಾಥ್ ಚಾಲನೆ ನೀಡಿದರು.
ಸಭಾ ಕಾರ್ಯಕ್ರಮ ಉದ್ಘಾಟಿಸಿದ ಮಂಜುನಾಥ್ ಮಾತನಾಡಿ, ಕನ್ನಡ ಭಾಷೆ ಉಳಿವಿಗೆ ಹಲವಾರು ಜನರು ಹೋರಾಟ ನಡೆಸಿದ್ದಾರೆ. ಸಾಹಿತಿಗಳು ಕೂಡ ತಮ್ಮದೇ  ಆದ ಕೊಡುಗೆ ನೀಡಿದ್ದಾರೆ ಎಂದರು.
ಸಲಹೆ: ನಗರ ಈಗ ಬೃಹದಾಕಾರವಾಗಿ ಬೆಳೆಯುತ್ತಿದೆ. ಅದರಂತೆ ಹೊರಗಿನಿಂದ ನಗರಕ್ಕೆ ಬರುವ ಜನರು ಹಾಗೂ ನಗರದ ಒಳಗೆ ಮತ್ತೊಂದು ಕಡೆಗೆ ಪ್ರಯಾಣಿಸುವವರಿಗೆ ಆಟೋ ಚಾಲಕರು ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ ಎಂದು ಹೇಳಿದರು. ಅಸಂಘಟಿತರು ಲಕ್ಷಾಂತರ ಜನರು ಇದ್ದಾರೆ ಅವರ ಸವಲತ್ತುಗಳ ಬಗ್ಗೆ ಸರ್ಕಾರ ಕಣ್ಣು ತೆರೆಯಬೇಕೆಂದು ಸಲಹೆ ನೀಡಿದರು. ದೇಶದಲ್ಲಿ ಕೋಟ್ಯಂತರ ನಾನಾ ಸಂಘಟನೆಗಳಿವೆ. ಮಾನವ ಸಂಪನ್ಮೂಲದ ಸಮರ್ಪಕವಾಗಿ ಸದ್ಬಳಕೆ ಆಗುತ್ತಿಲ್ಲ ಎಂದು ವಿಷಾದಿಸಿದರು. ಕಾರ್ಮಿಕರನ್ನು ಎಂದು ಕಡೆಗಣಿಸಬಾರದು ಎಂದು ಇದೆ ಸಂದರ್ಭದಲ್ಲಿ ಕಿವಿಮಾತು ಹೇಳಿದರು.
ಕಾರ್ಯಕ್ರಮಕ್ಕೆ ಮೊದಲು ಕರವೇ ಬಾವುಟವುಳ್ಳ ಧ್ವಜ ಹಾರಿಸಲಾಯಿತು. ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್, ಉಪಾಧ್ಯಕ್ಷ ಹರೀಶ್ ಗೌಡ, ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಎಸ್.ಜಿ. ಬೋರೇಗೌಡ, ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್ ಎಂ.ಬಿ. ರಾಘವೇಂದ್ರ ಬಾಬು, ನಗರ ಘಟಕದ ಶಿವು, ಸಂಘಟನಾ ಕಾರ್ಯದರ್ಶಿ  ವಸಂತಕುಮಾರ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.