ಹಾಸನ

ಅರಸೀಕೆರೆಯಲ್ಲಿ ಬಸವ ಜಯಂತಿ ಅದ್ಧೂರಿ

Published On :

ಕ.ಪ್ರ. ವಾರ್ತೆ  ಅರಸೀಕೆರೆ  ಮೇ 2
ಬಸವ ಜಯಂತಿ ಅಂಗವಾಗಿ ಶುಕ್ರವಾರ ಪಟ್ಟಣದ ಶ್ರೀ ಬಸವಣ್ಣನವರ ದೇವಾಲಯದಲ್ಲಿ ಶ್ರೀ ಬಸವೇಶ್ವರ ಸ್ವಾಮಿಯವರಿಗೆ ಸಹಸ್ರ ಬಿಲ್ವಾರ್ಚನೆ, ಸಹಸ್ರ ನಾಮಾರ್ಚನೆ, ರುದ್ರಾಭಿಷೇಕ, ವಿಶೇಷ ಪೂಜಾ ಕೈಕಂರ್ಯಗಳು ನೆರವೇರಿದವು.
ಗಣ್ಯಾತಿಗಣ್ಯರು ಹಾಗೂ ಭಕ್ತಾದಿಗಳು ಸಾಲಿನಲ್ಲಿ ನಿಂತು ಶ್ರೀ ಬಸವೇಶ್ವರ ಸ್ವಾಮಿಯವರಿಗೆ  ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಭಕ್ತಾದಿಗಳಿಗೆ ಪಾನಕ, ಫಲಹಾರ ವಿತರಿಸಲಾಯಿತು.
ಸಂಜೆ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮೆರವಣಿಗೆಗೆ ಚಾಲನೆ ನೀಡಲಾಯಿತು. ದೇವಾಲಯದ ಆವರಣದಿಂದ ನಾದ ಸ್ವರ, ಡೊಳ್ಳು ಕುಣಿತ, ನಾಸಿಕ್ ಡೋಲು, ನಂದಿ ಧ್ವಜಕುಣಿತ ಇನ್ನಿತರ ಜಾನಪದ ಕಲಾ ತಂಡಗಳೊಂದಿಗೆ ಸಾವಿರಾರು ಮಂದಿ ಮದ್ಯಾಹ್ನ 5 ಗಂಟೆಗೆ ಮೆರವಣಿಗೆ ಹೊರಟು ಶ್ಯಾನುಬೊಗರ ರಸ್ತೆಯ ಮೂಲಕ ಶಿವಾಲಯಕ್ಕೆ ತೆರಳಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಪೇಟೆ ಬೀದಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಸಾಯಿನಾಥ ರಸ್ತೆಯ ಮೂಲಕ ಬಸವೇಶ್ವರ ದೇವಾಲಯಕ್ಕೆ ತೆರಳಿ ಮೆರವಣಿಗೆ ಮುಕ್ತಾಯವಾಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿತ್ತು. ತಾಲೂಕು ಆಡಳಿತದ ಕಾರ್ಯಕ್ರಮ: ತಾಲೂಕು ಆಡಳಿತದ ವತಿಯಿಂದ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ತಾಲ್ಲೋಕು ಕಚೇರಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದ. ಶಾಸಕ ಕೆ.ಎಂ. ಶಿವಲಿಂಗೇಗೌಡರು ಮಾತನಾಡಿ, ಸಮಾಜದ ಮೇಲು ಕೀಳುಗಳನ್ನು ಹೋಗಲಾಡಿಸಿ, ಸಮಾಜದ ಮುಖ್ಯವಾಹಿನಿಗೆ ತರಲು 12ನೇ ಶತಮಾನದಲ್ಲಿಯೇ ಹೋರಾಟ ನಡೆಸಿದ ಮಹಾನ್ ಕ್ರಾಂತಿ ಪುರುಷ ಬಸವಣ್ಣ. ಇಂತಹ ಮಹಾತ್ಮರ ದೈವ ಪುರುಷರ ವಿಚಾರ, ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ತಹಸೀಲ್ದಾರ್ ನಟರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಇನ್ನಿತರ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.