ಕಮಲಾಪುರದಲ್ಲಿ ನೀರಿಗೆ ಹಾಹಾಕಾರ
ಜಾವಗಲ್: ಜಾವಗಲ್ ಹೋಬಳಿ ಕರಗುಂದ ಗ್ರಾಮ ಪಂಚಾಯ್ತಿಗೆ ಸೇರಿದ ಕಮಲಾಪುರದಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ.
700 ಅಡಿ ಕೊಳವೆ ಬಾವಿ ಕೊರೆದರೂ ಹನಿ ನೀರು ಸಿಗಲಿಲ್ಲ. ಈ ಬಗ್ಗೆಹರಳಳ್ಳಿ ಮತ್ತು ಕಾಮಲಾಪುರ ಗ್ರಾಮಗಳಿಗೆ ತ್ವರಿತವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಕಾಮಲಾಪುರದ ರಂಗಸ್ವಾಮಿ, ಲಕ್ಕೇಗೌಡ, ಗಿರಿಯಪ್ಪ ಮತ್ತಿತರರು ಶಾಸಕ ವೈ.ಎನ್. ರುದ್ರೇಶ್ ಗೌಡ ಅವರನ್ನು ವೃಂದಾವನಹಳ್ಳಿ ಗ್ರಾಮದಲ್ಲಿ ಭೇಟಿ ಮಾಡಿದರು.
ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಶಾಸಕರ ಗಮನ ಸೆಳೆದಾಗ, ಅರಸೀಕೆರೆ ತಹಸೀಲ್ದಾರ್ ಮತ್ತು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕೂಡಲೇ ಸಂಬಂಧಪಟ್ಟ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚಿಸಿದರು.
ಮನವಿ: ವೃಂದಾವನಹಳ್ಳಿ ಗ್ರಾಮಕ್ಕೆ 1ಕಿ.ಮೀ. ರಸ್ತೆ ಅಭಿವೃದ್ಧಿ, ಸಮುದಾಯ ಭವನ ಹಾಗೂ ವೃಂದಾವನಹಳ್ಳಿ ಆಯುರ್ವೇದ ಆಸ್ಪತ್ರೆಯಿಂದ ಕಲ್ಯಾಡಿ ಗೇರುಮರ ಗೇಟ್ವರೆಗೆ 3 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಿಕೊಡುವಂತೆ ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜು, ಮಾಜಿ ಉಪಾಧ್ಯಕ್ಷ ನೀಲಕಂಠಪ್ಪ, ಸದಸ್ಯ ವಿಭೂಷಣ, ಕಲ್ಯಾಡಿ ಶೇಖರ್ ಮತ್ತಿತರರು ಮನವಿ ಮಾಡಿದರು.
ನೀರಿನ ವ್ಯವಸ್ಥೆಗೆ ಮನವಿ: ಜಾವಗಲ್ ಹೋಬಳಿ ಕಲ್ಯಾಡಿ ಗ್ರಾಪಂಗೆ ಸೇರಿದ ಮುದಿನಿಂಗೇಗೌಡನ ಕೊಪ್ಪಲಿನಲ್ಲಿ ನೂತನವಾಗಿ ನಿರ್ಮಿಸಿರುವ ಮಾರುತಿ ದೇವಾಲಯದ ಪ್ರಾರಂಭೋತ್ಸವ ಹಾಗೂ ವಿಮಾನ ಗೋಪುರ ಕಳಸ ಪ್ರತಿಷ್ಠಾಪನ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮಸ್ಥರಿಂದ ಮನವಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಎಚ್.ಕೆ. ಜವರೇಗೌಡ, ಜಿಪಂ ಮಾಜಿ ಸದಸ್ಯ ಕೃಷ್ಣೇಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಕುಮಾರ್, ಯತೀಶ್, ಎಂ.ಎಚ್. ಮಂಜೇಗೌಡ, ನಟೇಶ್, ಗಣೇಶ್, ಕೃಷ್ಣೇಗೌಡ, ನಾಗರಾಜು, ಸೋಮೇಶ, ಎಪಿಎಂಸಿ ಮಾಜಿ ಸದಸ್ಯ ಸಿಂಗಟಗೆರೆ ರಾಮಣ್ಣ ಹಾಗೂ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

