ಹಾಸನ

'ಕಡ್ಡಾಯವಾಗಿ ಶೌಚ ನಿರ್ಮಿಸಿಕೊಳ್ಳಿ'

Published On :

ಅರಕಲಗೂಡು: ಗ್ರಾಮೀಣ ಜನರು ಶೌಚಾಲಯ ನಿರ್ಮಿಸಿಕೊಳ್ಳಲು ಸಂಕುಚಿತ ಮನೋಭಾವನೆತೊರೆಯಬೇಕು ಎಂದು ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಹೇಳಿದರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಶ್ರೀಗಂಧ ಸೇವಾ ಸಂಸ್ಥೆ,  ಕೊಣನೂರಿನ ಸಿ.ಎಂ.ಎಸ್.ಎಸ್. ಸೇವಾ ಸಂಸ್ಥೆ ಪ್ರಾದೇಶಿಕ ಕಚೇರಿ ಆಶ್ರಯದಲ್ಲಿ ತಾಲೂಕಿನ ದೊಡ್ಡಬೆಮ್ಮತ್ತಿ ಗ್ರಾಪಂ ವ್ಯಾಪ್ತಿಯ ಬಂದಿಗನ ಹಳ್ಳಿ ಗ್ರಾಮದಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಗ್ರಾಮಗಳು ಬೆಳೆದಂತೆ ಬಯಲು ಶೌಚಾಲಯಕ್ಕೆ ತೊಂದರೆಯಾಗುವುದರಿಂದ ಮತ್ತು ಮಹಿಳೆಯರು, ಗರ್ಭಿಣಿಯರ ಸಮಸ್ಯೆಗಳನ್ನು ಕುಟುಂಬದ ಸದಸ್ಯರು ಅರಿತು ಕಡ್ಡಾಯವಾಗಿ ಶೌಚಾಲಯವನ್ನು ನಿರ್ಮಾಣ ಮಾಡಿಕೊಳ್ಳುವಲ್ಲಿ ಆರ್ಥಿಕ ಸಹಾಯಕ್ಕಾಗಿ ಸಂಬಂಧಿಸಿದ ಪಂಚಾಯಿತಿಗಳನ್ನು ಸಂಪರ್ಕಿಸಿ ಸಹಾಯವನ್ನು ಪಡೆದುಕೊಳ್ಳಲು ಅವಕಾಶವಿದೆ ಎಂದರು.
ಸಿಎಂಎಸ್ಎಸ್ನ ಪ್ರಾದೇಶಿಕ ಕಚೇರಿಯ ಸಂಪನ್ಮೂಲ ವ್ಯಕ್ತಿ ಶಶಿಕಲಾ ಮಾತನಾಡಿ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿರುವುದರಿಂದ ಮಹಿಳೆಯರು ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ಹರಿಸಬೇಕು ಹಾಗೂ ಸ್ಥಳೀಯವಾಗಿ ಸಿಗುವ ಸೊಪ್ಪು ತರಕಾರಿಗಳನ್ನು ಹೆಚ್ಚು ಹೆಚ್ಚು ಉಪಯೋಗಿಸುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.