ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ
ಹಾಸನ: ತಮ್ಮ ಗ್ರಾಮದ ರಸ್ತೆ ದುರಸ್ತಿ ಮಾಡಿಸದಿದ್ದಲ್ಲಿ ರಸ್ತೆಯಲ್ಲಿರುವ ಜಲ್ಲಿ ತಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಸುರಿದು ಪ್ರತಿಭಟನೆ ಮಾಡುವುದಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಸ್. ತೀರ್ಥಪ್ಪ ಎಚ್ಚರಿಸಿದ್ದಾರೆ.
ಆಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ರಸ್ತೆಗೆ ಜಲ್ಲಿ ಹಾಕಿ ಎರಡು ತಿಂಗಳುಗಳೇ ಕಳೆದಿವೆ. ಆದರೆ, ಈವರೆಗೂ ಸಂಬಂಧಪಟ್ಟ ಗುತ್ತಿಗೆದಾರರಾಗಲಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾಗಲಿ ಇತ್ತ ತಲೆ ಹಾಕಿಲ್ಲ. ರಸ್ತೆಯ ಇಂತಹ ಕೆಟ್ಟ ಸ್ಥಿತಿಯಿಂದಾಗಿ ಜನರು ಪ್ರತಿನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ.
ಗ್ರಾಮಕ್ಕೆ ಬರಬೇಕಾದ ವಾಹನಗಳಿಗೆ ಅನ್ಯ ಮಾರ್ಗ ಇಲ್ಲದಿರುವುದರಿಂದ ಎಲ್ಲಾ ವಾಹನಗಳು ಇದೇ ರಸ್ತೆಯಲ್ಲೇ ಸಂಚರಿಸ ಬೇಕು. ಇಂತಹ ಸಂದರ್ಭದಲ್ಲಿ ರಸ್ತೆಯಲ್ಲಿರುವ ಜಲ್ಲಿ ಕಲ್ಲುಗಳು ವಾಹನಗಳ ಚಕ್ರಕ್ಕೆ ಸಿಲುಕಿ ಸಿಡಿದು, ಆ ಕಲ್ಲುಗಳು ರಸ್ತೆಯಲ್ಲಿ ಓಡಾಡುವ ಜನರು ಮತ್ತು ರಸ್ತೆ ಬದಿಯ ಮನೆಗಳಿಗೆ ಬಿದ್ದು ಹಾನಿಯುಂಟಾಗಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚನಾವಣೆ ಸಂದರ್ಭದಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಮತ ಕೇಳಲಿಕ್ಕಾಗಿ ಇದೇ ರಸ್ತೆಯಲ್ಲಿ ಓಡಾಡಿದ್ದಾರೆ. ಆ ಸಂದರ್ಭದಲ್ಲಿ ಕೂಡಲೇ ರಸ್ತೆ ದುರಸ್ತಿ ಮಾಡಿಸಿಕೊಡುವುದಾಗಿ ಪೊಳ್ಳು ಭರವಸೆ ಗಳನ್ನಷ್ಟೇ ನೀಡಿದ್ದರು. ಚುನಾವಣೆ ಮುಗಿದ ನಂತರದಲ್ಲಿ ಯಾರೊಬ್ಬರೂ ತಲೆ ಹಾಕಿಲ್ಲ.
ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳನ್ನು ಕೇಳಿದರೆ, ಸಂಬಂಧ ಪಟ್ಟ ಗುತ್ತಿಗೆದಾರರನ್ನು ಹುಡುಕಿ ಕರೆತಂದು ಕೆಲಸ ಮಾಡಿಸುವ ಜವಬ್ದಾರಿ ಎಂಜಿನಿ ಯರ್ಗಳದ್ದೇ ಹೊರತು ಗ್ರಾಮಸ್ಥರದ್ದಲ್ಲ. ಹಾಗಾಗಿ ಲೋಕೋಪ ಯೋಗಿ ಇಲಾಖೆ ಎಂಜಿನಿಯರ್ಗಳು ಕೂಡಲೇ ಅಪೂರ್ಣ ಗೊಂಡಿರುವ ರಸ್ತೆ ಯನ್ನು ಪೂರ್ಣಗೊಳಿಸದಿದ್ದಲ್ಲಿ ರಸ್ತೆಯ ಲ್ಲಿರುವ ಜಲ್ಲಿಯನ್ನು ಚೀಲದಲ್ಲಿ ತುಂಬಿ ಕೊಂಡು ಜಿಲ್ಲಾಧಿಕಾರಿ ಕಚೇರಿ ಮುಂದೆ ಸುರಿದು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

