'ಚುನಾವಣೆಗೆ ಜಿಲ್ಲಾಡಳಿತ ಸಹಕಾರ ಅಗತ್ಯ'
ಹಾಸನ: ಫೆಡರಲ್ ಸಹಕಾರ ಸಂಘಗಳ ಚುನಾವಣೆಗಳನ್ನು ಮುಕ್ತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಸಾರ್ವಜನಿಕ ಚುನಾವಣೆಗಳಲ್ಲಿ ಜಿಲ್ಲಾಡಳಿತವು ಮಾದರಿ ನೀತಿ ಸಂಹಿತೆ ಜಾರಿಗೆ ತರುವಂತೆ ಈ ಚುನಾವಣೆಗಳಲ್ಲಿಯೂ ಜಾರಿಗೆ ತರಲು ಬದ್ಧರಾಗಿದ್ದು, ಜಿಲ್ಲಾಡಳಿತವು ಸಹಕಾರ ನೀಡಬೇಕು ಎಂದು ರಾಜ್ಯ ಸಹಕಾರ ಚುನಾವಣಾ ಆಯೋಗದ ಆಯುಕ್ತ ಎನ್.ಸಿ. ಮುನಿಯಪ್ಪ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಫೆಡರಲ್ ಸಹಕಾರ ಸಂಘಗಳ ಚುನಾವಣೆ ಹಾಗೂ ಪ್ರತಿನಿಧಿ ನಮೂನೆ ವಿತರಣೆ ಕುರಿತಂತೆ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದ ಫೆಡರಲ್ ಸಹಕಾರ ಸಂಘಗಳ ಚುನಾವಣೆಗೆ ಜಿಲ್ಲಾಧಿಕಾರಿ ಅವರನ್ನು ಚುನಾವಣಾಧಿಕಾರಿ ಮಾಡಲಾಗಿದೆ. ರಿಟರ್ನಿಂಗ್ ಅಧಿಕಾರಿಗಳನ್ನಾಗಿ ರೆವಿನ್ಯೂ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದರು.
ಮಾರ್ಗದರ್ಶನ: ರಾಜ್ಯದಲ್ಲಿ 36 ಸೊಸೈಟಿಗಳ ಚುನಾವಣೆಯನ್ನು ಇದೇ ಮೇ 25, 26 ಹಾಗೂ 27 ರಂದು ನಡೆಸಲಾಗುತ್ತಿದೆ. ಅರ್ಹ ಮತದಾರರು ಮತ ಹಕ್ಕಿನಿಂದ ವಂಚಿತರಾಗಬಾರದು. ಆಯೋಗ ಕ್ರಮವಹಿಸುತ್ತಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ಹಾಲು ಒಕ್ಕೂಟ ಮತ್ತು ಜಿಲ್ಲಾ ಸಹಕಾರಿ ಒಕ್ಕೂಟಕ್ಕೆ ಮೇ 25ರಂದು ಚುನಾವಣೆ ನಡೆಯಲಿದೆ ಎಂದ ಅವರು, ಚುನಾವಣೆಗೆ ಸಂಬಂದಿಸಿದಂತೆ ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಕಿವಿಮಾತು: ರಾಜ್ಯದಲ್ಲಿ ಸಹಕಾರ ಚುನಾವಣಾ ಆಯೋಗ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗಿದ್ದು, ಈ ಅವಧಿಯಲ್ಲಿ ಆಯೋಗ 14 ಸಾವಿರ ಸೊಸೈಟಿಗಳ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದೆ. ಗುಣಮಟ್ಟದಲ್ಲಿ ಸುಧಾರಣೆಯಾಗಬೇಕು. ಈ ನಿಟ್ಟನಲ್ಲಿ ಆಯೋಗ ಕ್ರಮವಹಿಸುತ್ತಿದೆ. ಗುಣಮಟ್ಟ ಸುಧಾರಣೆಯಾಗದಿದ್ದರೆ ಆಯೋಗ ರಚನೆಯ ಉದ್ದೇಶ ಸಫಲವಾಗುವುದಿಲ್ಲ ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಉಪ ವಿಭಾಗಾಧಿಕಾರಿ ಶರತ್, ಜಿಲ್ಲಾಧಿಕಾರಿಯವರ ಕಚೇರಿಯ ಚುನಾವಣಾ ಶಾಖೆ ತಹಸೀಲ್ದಾರ್ ಬಾಬುರಾವ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರಿ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಹಾಗೂ ನಾನಾ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಡಿಸಿ ಭರವಸೆ
ಫೆಡರಲ್ ಸಹಕಾರ ಸಂಘಗಳ ಚುನಾವಣೆಗೆ ಜಿಲ್ಲಾಡಳಿತದವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದರು. ಸಹಕಾರ ಸಂಘಗಳ ಜಂಟಿ ನಿರ್ದೇಶಕ ಬಾಲಶೇಖರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

