ಹಾಸನ

ಜಲ ಸಂರಕ್ಷಣಾ ಜಾಗೃತಿ ಅಭಿಯಾನ

Published On :

ಜಾವಗಲ್: ಜಾವಗಲ್ ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರೀನ್ ಹಾರ್ಟ್ ಡ್ರೀಮ್ ಫೌಂಡೇಶನ್ ಸಹಯೋಗದಲ್ಲಿ ಬುಧವಾರ ಜಾವಗಲಲ್ಬಸಸ್ನಿಲ್ದಾಣದಲ್ಲಿ ಜಲ ಸಂರಕ್ಷಣಾ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು ಗ್ರೀನ್‌ಹಾರ್ಟ್ ಡ್ರೀಮ್ ಫೌಂಡೇಶನ್‌ನ ರಾಜ್ಯಾಧ್ಯಕ್ಷ ಕೆ.ಆರ್. ಲೋಕೇಶ್ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ನೀರಿನ ಅವಶ್ಯಕತೆ ಹೆಚ್ಚಾಗಿದ್ದು, ನೀರನ್ನು ಮಿತವಾಗಿ ಬಳಸಿ ಅಂತರ್ಜಲವನ್ನು ಹೆಚ್ಚಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅನಿವಾರ್ಯ ಎಂದರು.
ಮಳೆ ನೀರನ್ನು ಸಂಗ್ರಹಿಸಿ ಬಳಕೆ ಮಾಡಿಕೊಳ್ಳಬೇಕೆಂದ ಅವರು, ಶುದ್ಧವಾದ ನೀರನ್ನು ಉಪಯೋಗಿಸುವುದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದರು. ಕಾರ್ಯದರ್ಶಿ ಎಚ್.ಎಲ್. ಕಿರಣ್ ಕುಮಾರ್ ಮಾತನಾಡಿ, ನೀರಿನಿಂದ ಹರಡುವ ಕಾಯಿಲೆಗಳು, ಶುದ್ಧ ನೀರಿನ ಉಪಯೋಗದ ಬಗ್ಗೆ ವಿವರಿಸಿದರು.
ಕರವೇ ಅಧ್ಯಕ್ಷ ಜಾ.ಹ. ದಯಾನಂದ್ ಮಾತನಾಡಿ, ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿ ಇತರರಿಗೂ ಉಪಯೋಗವಾಗಲು ಸಹಕರಿಸಬೇಕೆಂದರು. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರನ್ನು ವಿತರಿಸಿದರು. ಕರವೇ ದಿಕೆಯ ಭಾನುಪ್ರಕಾಶ್, ಕರವೇ ಮಹಿಳಾ ಘಟಕದ ಅಧ್ಯಕ್ಷೆ ಜಗದಾಂಬ ,ಡಿ.ಎಸ್.ಎಸ್‌ನ ಚಂದ್ರಪ್ಪ, ವೇದಮೂರ್ತಿ, ಫಿರೋಜ್‌ಗಾಂಧಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.