ಹಾಸನ

ಟಾಸ್ಕ್ ಫೋರ್ಸ್ ಸಭೆ ಕರೆಯಲು ಸೂಚನೆ

Published On :

ಕನ್ನಡಪ್ರಭ ವಾರ್ತೆ, ಅರಸೀಕೆರೆ, ಮೇ 8
ತೀವ್ರ ಬರಗಾಲ, ಮಳೆ ಅಭಾವ, ಅಂತರ್ಜಲ ಕುಸಿತದಿಂದ ತಾಲೂಕಿನಲ್ಲಿ ಉದ್ಭವಿಸಿರುವ ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಸದ್ಯದಲ್ಲಿಯೇ ಟಾಸ್ಕ್ ಫೋರ್ಸ್ ಸಭೆ ಕರೆಯಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.
ತಾಲೂಕಿನಲ್ಲಿ ಎದುರಾಗಿರುವ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳಮಟ್ಟದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ 80ಕ್ಕೂ ಹೆಚ್ಚು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗಿದೆ. ಸಮಸ್ಯೆಯ ನಿವಾರಣೆಗೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದ್ದು ಅನುದಾನದ ಕೊರತೆ ಎದುರಾಗಿಲ್ಲ. ಸರ್ಕಾರ ಅಗತ್ಯ ನೆರವು ನೀಡಿದ್ದು ಕುಡಿಯುವ ನೀರಿನ ಬವಣೆ ಇರುವ ಕಡೆಗಳಲ್ಲಿ ಮತ್ತಷ್ಟು ಟ್ಯಾಂಕರ್ ಸೌಲಭ್ಯ ನೀಡಲಾಗುವುದು ಎಂದರು.        
ಜಿಪಂ ಸಿಇಒಗೆ ಸೂಚನೆ: ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಸರ್ಕಾರದ ವತಿಯಿಂದ ಕೊಳವೆ ಬಾವಿ ಕೊರೆಸಲಾಗುತ್ತಿದೆ. ಆದರೆ ನೀರು ಬಾರದಿರುವ ಕೊಳವೆ ಬಾವಿಗಳಲ್ಲಿ ಕೇಸಿಂಗ್ ಪೈಪ್‌ಗಳನ್ನು ಹಾಗೆಯೇ ಬಿಟ್ಟು ಬರುತ್ತಿರುವುದನ್ನು ಪತ್ರಕರ್ತರು ಜಿಲ್ಲಾಧಿಕಾರಿಗಳ ಗಮನಕ್ಕೆ  ತಂದಾಗ ತಕ್ಷಣವೇ ಸ್ಥಳದಲ್ಲಿದ್ದ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿ ಇಂತಹ ಅಂಶಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ವರದಿ ನೀಡುವಂತೆ ಸೂಚಿಸಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡ ಇದಕ್ಕೆ ದನಿಗೂಡಿಸಿ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕೊರೆಯಿಸಲಾಗುತ್ತಿರುವ ಕೊಳವೆ ಬಾವಿಗಳಲ್ಲಿ ಕೆಲವು ವಿಫಲವಾಗಿವೆ. ಅಂತಹ ಕೊಳವೆ ಬಾವಿಗಳ ಕೇಸಿಂಗ್ ಪೈಪ್‌ಗಳನ್ನು ಇಲಾಖೆ ಪುನಃ ತೆಗೆದುಕೊಂಡು ಬಾರದಿರುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ವ್ಯವಸ್ಥೆ ಸರಿಪಡಿಸುವಂತೆ ಹೇಳಿದರು. ಈ ಸಂದರ್ಭದಲ್ಲಿ ಜಿ.ಪಂ.ಸಿ, ಇ.ಓ.ಯು.ಪಿ.ಸಿಂಗ್, ಕಂದಾಯ ಉಪವಿಭಾಗಾಧಿಕಾರಿ ಶರತ್, ತಹಸೀಲ್ದಾರ್ ನಟರಾಜ್, ತಾ.ಪಂ. ಇ.ಒ.ಟಿ.ಎನ್ ಮೂರ್ತಿ, ಎ.ಇ.ಇ. ಶೇಖರಪ್ಪ, ಜಿಪಂ ಎಂಜಿನಿಯರ್ ರಾಮಚಂದ್ರ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಇದ್ದರು.



ಸಮಸ್ಯೆಯ ನಿವಾರಣೆಗೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದ್ದು ಅನುದಾನದ ಕೊರತೆ ಎದುರಾಗಿಲ್ಲ. ಸರ್ಕಾರ ಅಗತ್ಯ ನೆರವು ನೀಡಿದ್ದು ಕುಡಿಯುವ ನೀರಿನ ಬವಣೆ ಇರುವ ಕಡೆಗಳಲ್ಲಿ ಮತ್ತಷ್ಟು ಟ್ಯಾಂಕರ್ ಸೌಲಭ್ಯ ನೀಡಲಾಗುವುದು.
ಟಿ  ಅನ್ಬುಕುಮಾರ್, ಜಿಲ್ಲಾಧಿಕಾರಿ


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.