ಜಮೀನು ವಶ ಕೈಬಿಡಲು ಆಗ್ರಹಿಸಿ ಹೆಬ್ಬಸಾಲೆ ಗ್ರಾಮಸ್ಥರ ಮನವಿ
ಸಕಲೇಶಪುರ: ಎತ್ತಿನಹೊಳೆ ಕಾಮಗಾರಿ ಅನುಷ್ಠಾನಕ್ಕಾಗಿ ಗ್ರಾಮದ ಜಮೀನು ವಶಪಡಿಸಿಕೊಳ್ಳವುದನ್ನು ಕೈ ಬಿಡಬೇಕು ಎಂದು ಹೆಬ್ಬಸಾಲೆ ಗ್ರಾಮಸ್ಥರು ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.
ಪಟ್ಟಣದ ಮಿನಿವಿಧಾನ ಸೌದದ ಸಮೀಪ ಶಾಸಕರನ್ನು ಭೇಟಿ ಮಾಡಿದ ಗ್ರಾಮಸ್ಥರು, ತಮ್ಮ ಗ್ರಾಮದಲ್ಲಿ ಕಳೆದೊಂದು ವಾರದಿಂದ 5 ತಂಡಗಳಲ್ಲಿ ಅಧಿಕಾರಿಗಳ ಆಗಮಿಸಿ ಸರ್ವೇಕಾರ್ಯ ನಡೆಸುತ್ತಿದ್ದು ಗ್ರಾಮದ ಕಾಫಿ ಹಾಗೂ ಬತ್ತದ ಗದ್ದೆಗಳ ಮೂಲಕ ಪೈಪ್ ಲೈನ್ ಹಾಗೂ ರಸ್ತೆ ನಿರ್ಮಿಸಲು ಗ್ರಾಮದ ಸುಮಾರು 200 ಎಕರೆ ಭೂಮಿ ವಶಪಡಿಸಿಕೊಳ್ಳುವ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂಬ ಮಾಹಿತಿ ಇದೆ. ಆದರೆ, ಈ ಯೋಜನೆ ಜಾರಿಗೆ ನಮ್ಮ ಭೂಮಿ ನೀಡಲು ಸಿದ್ಧವಿಲ್ಲ. ಗ್ರಾಮಸ್ಥರ ವಿರೋಧ ಲೆಕ್ಕಿಸದೇ ಯೋಜನೆ ಜಾರಿಗೆ ಮುಂದಾದರೆ ತೀವ್ರ ಹೋರಾಟ ಅನಿವಾರ್ಯವಾಗುತ್ತದೆ. ಆದ್ದರಿಂದ, ಸರ್ವೇ ಕಾರ್ಯವನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.
ಶಾಸಕರ ಭರವಸೆ: ಈ ಸಂದರ್ಭದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಚ್.ಕೆ ಕುಮಾರಸ್ವಾಮಿ, ಗ್ರಾಮಸ್ಥರನ್ನು ವಿಶ್ವಾಸಕ್ಕೆ ಪಡೆಯದೆ ಏಕಾಏಕಿ ಸರ್ವೇಕಾರ್ಯಕ್ಕೆ ಮುಂದಾಗಿರುವ ಅಧಿಕಾರಿಗಳ ಕ್ರಮ ಅವೈಜ್ಞಾನಿಕ. ಈ ಕಾರ್ಯಕ್ಕೆ ನನ್ನ ಸಂಪೂರ್ಣ ವಿರೋಧವಿದ್ದು ಗ್ರಾಮಕ್ಕೆ ಇನ್ನೆರಡು ದಿನಗಳಲ್ಲಿ ಆಗಮಿಸಿ ಪರಿಸ್ಥಿತಿ ಅವಲೋಕಿಸಿ ಅಧಿಕಾರಿಗಳೊಂದಿಗೆ ಮಾತನಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ರಾಮಚಂದ್ರ, ಮುರುಗೇಶ್, ಪ್ರಶಾಂತ್ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

