ಸಹಕಾರ ಗುಣ ಬೆಳೆಸಿಕೊಳ್ಳಿ ಶಿವಾಚಾರ್ಯ ಶ್ರೀ ಆಶೀರ್ವಚನ
ಹಾಸನ: ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
ನಗರದ ಕೆ.ಆರ್.ಪುರಂ ಬಡಾವಣೆಯ ವಿಜಯ ಆಂಗ್ಲ ಮಾಧ್ಯಮ ಶಾಲೆ ಸಭಾಂಗಣದಲ್ಲಿ ಭಾರತೀಯ ಹಿಂದುಳಿದ ವರ್ಗಗಳ ಸಾಮಾಜಿಕ ಸೇವಾ ಎಜುಕೇಷನ್ ಡೆವಲಪ್‌ಮೆಂಟ್ ಟ್ರಸ್ಟ್ ಮತ್ತು ಕಾರ್ಮಿಕ ಸಂಘ, ಕನ್ನಡ ಪರ ಹೋರಾಟಗಾರರ ಸಂಘ ಹಾಗೂ ಇತರೆ ಸಂಸ್ಥೆಗಳ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಗತ್ತಿನಲ್ಲಿ ಹಣ, ಆಸ್ತಿಗಾಗಿ ಹೊಡೆದಾಡಿ ತನ್ನ ಪ್ರಾಣ ಕಳೆದುಕೊಳ್ಳುವುದಲ್ಲದೇ, ಇತರರ ಪ್ರಾಣ ತೆಗೆಯಲು ಕೂಡ ಮುಂದಾಗುತ್ತಾನೆ. ಆದರೆ ಭಗವಂತನ ಪಾತ್ರಕ್ಕೆ ಹತ್ತಿರವಾಗುವ ಕೆಲಸ ಮಾಡುವವರು ವಿರಳ ಎಂದು ವಿಷಾದಿಸಿದರು.
ಕರ್ನಾಟಕ ವೀರಕನ್ನಡಿಗರ ಸೇನೆ ರಾಜ್ಯಾಧ್ಯಕ್ಷದ ಕೆ.ಟಿ. ರವೀಂದ್ರ ಕುಮಾರ್ ಮಾತನಾಡಿ, ಸರ್ಕಾರದಿಂದ ಬರುವ ಸವಲತ್ತುಗಳನ್ನು ಜನತೆಗೆ ತಲುಪುವ ಕೆಲಸ ಸಂಘ ಸಂಸ್ಥೆಗಳು ಮಾಡಬೇಕಾಗಿದೆ. ಇದಕ್ಕಾಗಿ ನೇಮಿಸಿದ ಅಧಿಕಾರಿಗಳಾಗಲಿ, ಜಾಹಿರಾತುಗಳಾಗಲಿ ಕಾರ್ಮಿ ಕರಿಗೆ ಮುಟ್ಟುವ ಕೆಲಸ ಮಾಡಲಾಗುತ್ತಿಲ್ಲ ಎಂದು ದೂರಿದರು.
ನಾಡು- ನುಡಿ ಉಳಿವಿಗಾಗಿ ಹೋರಾಟ ಮಾಡಿದಕ್ಕೆ ನನ್ನ ಮೇಲೆ 22 ಕೇಸುಗಳು ಪೊಲೀಸ್ ಇಲಾಖೆಯಿಂದ ಬಳುವಳಿಯಾಗಿ ನೀಡಿದ್ದಾರೆ. ಈಗಲು 18 ಕೇಸುಗಳ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಹೇಳಿಕೊಳ್ಳುವ ಮೂಲಕ ತಮ್ಮ ಅಳಲು ತೋಡಿಕೊಂಡರು. ಕಾರ್ಯಕ್ರಮದಲ್ಲಿ ಗಣನಿಯ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಿ ಗೌರವಿಸಲಾಯಿತು. ನಂತರ ಸ್ವಯಂಪ್ರೇರಿತವಾಗಿ ರಕ್ತದಾನ ನಡೆಯಿತು. ಸಮಾಜ ಸೇವಕ ಅಮ್ಜದ್ ಖಾನ್, ಲತೇಶ್, ಬ್ಲಡ್‌ಬ್ಯಾಂಕ್ ಮ್ಯಾನೇಜರ್ ನಟೇಶ್, ಮಹಮದ್ ನಮಾನ ಸೈಯದ್, ಖಜಾಂಚಿ ಎಚ್.ಎನ್. ಮಂಜುನಾಥ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

