ಅಕ್ರಮ ಕಟ್ಟಡ ಕಾಮಗಾರಿ ತಡೆಯಿರಿ
ಬೇಲೂರು: ತಾಲೂಕು ಪಂಚಾಯ್ತಿಗೆ ಸೇರಿದ ಹೊಳೆಬೀದಿಯಲ್ಲಿನ ಡಾ.ಅಂಬೇಡ್ಕರ್ಭ್ವನದ ಪಕ್ಕದಲ್ಲಿನ ನಿವೇಶನದಲ್ಲಿ ಮಳಿಗೆ ನಿರ್ಮಾಣ ಮಾಡಲು ಖಾಸಗಿ ವ್ಯಕ್ತಿಗಳು ಕೆಲಸ ಮಾಡಿಸುತ್ತಿರುವ ಬಗ್ಗೆ ಡಾ. ಅಂಬೇಡ್ಕರ್ ಭವನ ಟ್ರಸ್ಟ್ನ ಅಧ್ಯಕ್ಷ ಶಾಸಕ ವೈ.ಎನ್. ರುದ್ರೇಶ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ುದ್ದಿಗಾರರೊಂದಿಗೆ ಮಾತನಾಡಿ, ತಾಲೂಕು ಪಂಚಾಯಿತಿಗೆ ಸೇರಿದ ಹೊಳೆಬೀದಿಯಲ್ಲಿನ ಡಾ. ಅಂಬೇಡ್ಕರ್ ಭವನದ ಪಕ್ಕದಲ್ಲಿನ ನಿವೇಶನದಲ್ಲಿ ನಾಲ್ಕರಿಂದ ಐದು ಜನ ಸೇರಿ ನಿವೇಶನ ಬಾಡಿಗೆ ನೀಡುವುದಕ್ಕಾಗಿ ಕೆಲಸ ಮಾಡಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದರು.
ಕ್ರಮ ಕೈಗೊಂಡಿದ್ದಾರೆ: ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಕಾಮಗಾರಿ ನಡೆಯದಂತೆ ತಡೆಯಲು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದ್ದೇನೆ. ಅದರಂತೆ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.
ಟ್ರಸ್ಟಿನಲ್ಲಿ ಈಗಾಗಲೇ ರು. 17 ಲಕ್ಷಕ್ಕೂ ಹೆಚ್ಚು ಹಣವಿದೆ. ಈ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುವುದು. ಡಾ. ಅಂಬೇಡ್ಕರ್ ಭವನದ ಕಟ್ಟಡದ ಮೇಲ್ಭಾಗದಲ್ಲಿ ಸಭಾ ಭವನ ನಿರ್ಮಿಸುವುದಕ್ಕೆ ರು. 24 ಲಕ್ಷ ಹಣ ಬಿಡುಗಡೆಯಾಗಿದೆ. ಆದರೆ ಈ ಸಭಾ ಭವನ ನಿರ್ಮಿಸುವುದಕ್ಕೆ ಒಟ್ಟು ರು. 34 ಲಕ್ಷ ಬೇಕಾಗಿರುವುದರಿಂದ ಹೆಚ್ಚುವರಿ ಹಣ ಬಂದ ನಂತರ ಕೆಲಸ ಪ್ರಾರಂಭಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

