ಹಾಸನ

ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಫಲಿತಾಂಶ

Published On :

ಹೊಳೆನರಸೀಪುರ: ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿನ ನಗರ ಪ್ರದೇಶದಲ್ಲಿನ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕೂಡ ಯಾವುದರಲ್ಲೂ ಕಡಿಮೆ ಇಲ್ಲದಂತೆ ಉತ್ತಮ ಫಲಿತಾಂಶ ಪಡೆದು ಮೇಲುಗೈ ಸಾಧಿಸುವಲ್ಲಿ ಯಶ ಕಂಡಿದ್ದಾರೆ.
ತಾಲೂಕಿನ ನಗರನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪಲಿತಾಂಶ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪ್ರಾಂಶುಪಾಲ ಕೆ.ಎಸ್. ಸತೀಶ್ ಕುಮಾರ್ ತಿಳಿಸಿದ್ದಾರೆ.
ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 46 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 30 ವಿದ್ಯಾರ್ಥಿಗಳು ಪ್ರಥಮ, 11 ವಿದ್ಯಾರ್ಥಿಗಳು ದ್ವಿತೀಯ ಹಾಗೂ 2 ವಿದ್ಯಾರ್ಥಿಗಳು ತೃತೀಯ ಸ್ಥಾನದಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಶೇ. 93.50 ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
      ತಾಲೂಕಿನ ಹಳ್ಳಿಮೈಸೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ಪಿಯುಸಿ ಪರೀಕ್ಷೆಗೆ 89 ವಿದ್ಯಾರ್ಥಿಗಳು ಹಾಜರಾಗಿದ್ದು, ಇವರಲ್ಲಿ ಅತ್ಯುತ್ತಮ ಧರ್ಜೆಯಲ್ಲಿ-1, ಪ್ರಥಮ ಧರ್ಜೆಯಲ್ಲಿ-31, ದ್ವಿತೀಯ ದರ್ಜೆಯಲ್ಲಿ- 19 ಹಾಗೂ ತಣತೀಯ ಧರ್ಜೆಯಲ್ಲಿ-17ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಂಶುಪಾಲರಾದ ಎ.ಎಸ್.ರಾಜಶೇಖರರ್ತಿಳಿಸಿದ್ದಾರೆ. ಇವರಲ್ಲಿ ಕೆ.ಪಿ. ವೀಣಾ-512(ಶೇ.85.33), ಎಚ್.ಎಂ. ವಿನುತಾ - 476 (ಶೇ.79.33), ಎಚ್.ಎ. ಅನುಷಾ- 472(ಶೇ. 78.64) ಹಾಗೂ ಕೆ.ಕೆ. ಕೀರ್ತನಾ - 472ಅಂಕಗಳಿಸಿ ಶೇ. 78.64ರಷ್ಟು ಅಂಕಗಳಿಸಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.


ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು
ನಗರನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳ ಪಟ್ಟಿ ಈ ರೀತಿ ಇದೆ...
ಎಚ್.ಎನ್. ರೂಪಾ        - 509  
ಎಚ್.ಎಸ್.ಕುಮಾರ್     - 508
ಕೆ.ಬಿ. ಸುಮ                        - 507
ಆರ್.ಎಮ್. ಸ್ಮಿತಾ          - 502



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.