278 ಚೀಲ ಅನ್ನಭಾಗ್ಯ ಅಕ್ಕಿ ವಶ
ಹಾಸನ: ಕಾಳಸಂತೆಯಲ್ಲಿ ಮಾರಾಟ ಮಾಡಲು ಹಾಸನದಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 278 ಚೀಲ ಅಕ್ಕಿಯ ಜೊತೆಗೆ ಇಬ್ಬರು ಆರೋಪಿಗಳನ್ನು ಬಡಾವಣೆ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಕೇರಳ ಮೂಲದ ಗುಲಾಬ್ ಹುಸೇನ್ ಮತ್ತು ಬಶೀರ್ ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಮಧ್ಯರಾತ್ರಿ 2 ಗಂಟೆ ಸುಮಾರಿನಲ್ಲಿ, ಹಾಸನದಿಂದ ಕೇರಳ ನೋಂದಣಿ ಇರುವ ಲಾರಿಯಲ್ಲಿ ಅಕ್ರಮವಾಗಿ 278 ಚೀಲ ಅಕ್ಕಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಡಾವಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಅಕ್ಕಿ ಅನ್ನಭಾಗ್ಯ ಅಕ್ಕಿ ಮಾದರಿ ಇದ್ದ ಕಾರಣ ಹಾಗೂ ಬಿಲ್ ಇರದ ಕಾರಣ ಪೊಲೀಸರು ಅನುಮಾನಗೊಂಡು ಅಕ್ಕಿ ಮತ್ತು ಆರೋಪಿಗಳ ಸಮೇತ ಲಾರಿಯನ್ನು ಪಡೆದುಕೊಂಡಿದ್ದಾರೆ. ಆನಂತರ ನಡೆದ ವಿಚಾರಣೆಯಲ್ಲಿ, ಅಕ್ಕಿಯು ಅನ್ನಭಾಗ್ಯ ಯೋಜನೆಗೆ ಸೇರಿದ್ದು ಎಂಬುದು ತಿಳಿದು ಬಂದಿದೆ.
ಅನ್ನ ಭಾಗ್ಯ ಅಕ್ಕಿಯನ್ನು ಸಂಪೂರ್ಣವಾಗಿ ಬೇರ್ಪಡಿಸಿ ಲಯನ್ಸ್ ಬ್ರಾಂಡ್ ಐಆರ್-8 ರಾ ರೈಸ್, ಜೆಪಿ ಅಗ್ರಿ ಕಮಾಡಿಟೀಸ್ ಷಹಜಹಾನ್ಪುರ ಉತ್ತರ ಪ್ರದೇಶ ಎಂಬ ಹೆಸರಿನ ಬಿಳಿ ಚೀಲದಲ್ಲಿ ಅಕ್ಕಿ ತುಂಬಲಾಗಿತ್ತು.
ಹಿಂದಿನ ಪ್ಲಾನ್ ಏನು?: ತಲಾ 50 ಕೆಜಿ ಇರುವ ಚೀಲವನ್ನು ಸಂಪೂರ್ಣವಾಗಿ ಬದಲು ಮಾಡಿದ್ದು, ಹಾಸನದ ಟ್ರೇಡರ್ ಒಬ್ಬರು ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಖರೀದಿಸಿ ನಂತರ ರೈಸ್ ಮಾಲೀಕರ ಸಹಾಯದಿಂದ ಚೀಲ ಬದಲಿಸಿ ಕೇರಳಕ್ಕೆ ಸಾಗಿಸುತ್ತಿದ್ದರು. ಜೊತೆಗೆ ಅನ್ನಭಾಗ್ಯ ಅಕ್ಕಿಯನ್ನು ಕೇರಳಕ್ಕೆ ಕಳುಹಿಸಿ, ಅಲ್ಲಿಂದ ಬೇರೆ ಅಕ್ಕಿಯನ್ನು ಹಾಸನಕ್ಕೆ ತರಿಸಿ ಇಲ್ಲಿ ಮಾರಾಟ ಮಾಡುವ ಹುನ್ನಾರ ಹೊಂದಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ.
ಗುರು ರೈಸ್ ಮಿಲ್ ಶಾಮೀಲು?
ಇತ್ತೀಚೆಗೆಷ್ಟೇ ಪೆನ್ಷನ್ ಮೊಹಲ್ಲಾ ಪೊಲೀಸರು 50 ಚೀಲ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡಿದ್ದ ಘಟನೆ ಮಾಸುವ ಮುನ್ನವೇ ಮತ್ತೆ ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಣೆ ಘಟನೆ ನಡೆದಿದೆ. ಈ ಅಕ್ಕಿ, ಗುರು ರೈಸ್ ಮಿಲ್ನಿಂದ ಕೇರಳಕ್ಕೆ ಸಾಗಣೆಯಾಗುತ್ತಿತ್ತು ಎಂಬ ಮಾಹಿತಿಯನ್ನು ಆರೋಪಿಗಳು ನೀಡಿದ್ದಾರೆ. ಈ ಹಿಂದೆಯೂ ಸಹ ಗುರು ರೈಸ್ಮಿಲ್ನಿಂದ ಅಕ್ರಮವಾಗಿ ಅಕ್ಕಿ ಸಾಗಣೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

