ಹಾಸನ

ಆಹಾರ ಸೂಕ್ತ ಬಳಕೆಯಲ್ಲಿ ಮನುಷ್ಯ ವಿಫಲ: ಡಾ. ವರದರಾಜ್

Published On :

ಹಾಸನ: ಆಧುನಿಕ ಜೀವನದ ಬೆನ್ನೇರಿದ ಮನುಜ, ತನ್ನ ಆಹಾರದ ಪ್ರಮಾಣಕ್ಕಿಂತ ಔಷಧಿಯನ್ನೇ ಹೆಚ್ಚು ಪ್ರಮಾಣದಲ್ಲಿ ಸೇವಿಸುತ್ತಾ, ಅತ್ಯಮೂಲ್ಯ ಔಷಧಿ ಗುಣಗಳನ್ನು ಹೊಂದಿರುವ ಆಹಾರವನ್ನು ಸೂಕ್ತವಾಗಿ ಬಳಸಿಕೊಳ್ಳುವುದರಲ್ಲಿ ವಿಫಲನಾಗಿದ್ದಾನೆ ಎಂದು ಮೈಸೂರಿನ ಸಿ.ಎಫ್.ಟಿ.ಆರ್.ಐ ನ ಹಿರಿಯ ವಿಜ್ಞಾನಿ ಡಾ. ವರದರಾಜ್ ಅಭಿಪ್ರಾಯಪಟ್ಟರು.
ನಗರದ ಎಸ್.ಡಿ.ಎಂ ಆಯುರ್ವೇದ ಮಹಾವಿದ್ಯಾಲಯದ ಸ್ವಸ್ಥವೃತ್ತ ಸ್ನಾತಕೋತ್ತರ ವಿಭಾಗದ ವತಿಯಿಂದ ಆಯುರ್ವೇದ ಪಥ್ಯ ಆಹಾರದ ಕುರಿತಾದ 2 ದಿನಗಳ ರಾಷ್ಟ್ರೀಯ ಕಾರ್ಯಾಗಾರ ಸ್ವಸ್ಥಕಲ್ಪನಾ- 2014ನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಡಾ. ಕೆ.ಜೆ. ಮಲ್ಲಿಕಾ ಮುಖ್ಯ ಅತಿಥಿಗಳಾಗಿ ನವದೆಹಲಿಯ ಖ್ಯಾತ ಆಯುರ್ವೇದ ತಜ್ಞ ಡಾ. ತನುಜಾ ನೇಸರಿ, ಮೈಸೂರಿನ ಸಿ.ಎಫ್.ಟಿ.ಆರ್, ಆಹಾರ ವಿಜ್ಞಾನಿ ಡಾ. ಕಲ್ಪನಾ ಪ್ಲಾಟೆಲ್ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಸನ್ನ ನರಸಿಂಹ ರಾವ್ ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ವಿಭಾಗದ ಡೀನ್ ಡಾ. ಟಿ.ಬಿ ತ್ರಿಪಾಠಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಗಾಯಿತ್ರಿ ಮತ್ತು ವೃಂದದವರ ಧನ್ವಂತರಿ ಪ್ರಾರ್ಥನೆಯೊಂದಿಗೆ ಸಮಾರಂಭ ಆರಂಭಗೊಂಡಿತು. ಡಾ. ಗುರುಬಸವರಾಜ್ ಯಲಗಚ್ಚಿನ ಮತ್ತು ಡಾ. ಸೌರಭ್ ಅಗರವಾಲ್ ನಿರೂಪಿಸಿದರು. ಕಾರ್ಯಾಗಾರದ ಸಂಘನಾ ಕಾರ್ಯದರ್ಶಿ ಮತ್ತು ಸ್ವಸ್ಥವೃತ್ತ ವಿಭಾಗದ ಮುಖ್ಯಸ್ಥ ಡಾ. ಶಿವಕುಮಾರ್ ವಂದಿಸಿದರು.  
ಪಥ್ಯ ಆಹಾರಕ್ಕೆ ಸಂಬಂಧಿಸಿದ ಕಾರ್ಯಾಗಾರ ಪ್ರಾಯೋಗಿಕವಾಗಿ ನಡೆಯಿತು. ಎರಡು ದಿನದ ಕಾರ್ಯಾಗಾರದಲ್ಲಿ ದೇಶದ ನಾನಾ ರಾಜ್ಯಗಳಿಂದ 75 ಜನ ಆಯುರ್ವೇದ ಸ್ನಾತಕೋತ್ತರ ವಿದ್ಯಾರ್ಥಿಗಳು, ಆಯುರ್ವೇದ ತಜ್ಞರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.