ಹಾಸನ

ಸೂಕ್ತ ಮಾಹಿತಿ ನೀಡದ್ದಕ್ಕೆ ಅನ್ಯಾಯ

Published On :

ಹಾಸನ: ರಾಜಕಾರಣಿಗಳು ನ್ಯಾಯಾಲಯಕ್ಕೆ ಸರಿಯಾದ ಮಾಹಿತಿ ಒದಗಿಸದೆ ಕಾರಣ ಕನ್ನಡಕ್ಕೆ ಅನ್ಯಾಯವಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ 1034 ಜಯಂತ್ಯುತ್ಸವ ಹಾಗೂ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನ್ಯಾಯಾಲಯ ಕನ್ನಡದ ಬಗ್ಗೆ ಈ ರೀತಿ ತೀರ್ಪು ನೀಡಲು ಮುಖ್ಯವಾಗಿ ರಾಜಕಾರಣಿಗಳು ಕಾರಣವಾಗಿದೆ. ಸಮರ್ಪಕವಾಗಿ ಕಾರ್ಯನಿರ್ವಹಿಸಿ ಮಾಹಿತಿ ನೀಡಿದ್ದರೆ ಕನ್ನಡಕ್ಕೆ ಅನ್ಯಾಯವಾಗುತ್ತಿರಲಿಲ್ಲ ಎಂದರು.
ನಿರಂತರ ಕೆಲಸ ನಡೆಯಬೇಕು: ಕನ್ನಡಕ್ಕೆ ಈಗ ಅಪಾಯ ಬಂದು ರಾಜ್ಯದ ಕನ್ನಡ ಶಾಲೆಗಳು ಒಂದೊಂದಾಗಿ ಮುಚ್ಚುತ್ತಿದ್ದರೇ ಮತ್ತೊಂದು ಕಡೆ ಅದಕ್ಕಿಂತ ವೇಗವಾಗಿ ಇಂಗೀಷ್ ಮಾಧ್ಯಮ ಶಾಲೆಗಳು ತೆರೆಯುತ್ತಿವೆ. ಮೊದಲು ಹೆತ್ತ ತಾಯಿಗೆ ಗೌರವ ನೀಡುವ ಹಾಗೆ ಮಾತೃಭಾಷೆಯನ್ನು ಉಳಿಸಿ, ಬೆಳೆಸುವ ಅಗತ್ಯತೆ ಇದೆ. ನಮ್ಮ ನಾಡಿನ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸುವಂತ ಕೆಲಸ ನಿರಂತರವಾಗಿ ನಡೆಯಬೇಕು ಎಂದರು.  
ಮಕ್ಕಳಲ್ಲಿ ಸಂಸ್ಕಾರ ಬೆಳೆಸಬೇಕು: ದೇವರ ದಾಸಿಮಯ್ಯ ಅವರ ವಚನದ ಅರ್ಥವನ್ನು ಜನತೆಗೆ ಮುಟ್ಟಿಸುವ ಕೆಲಸ ಆಗಬೇಕು. ಆದರೆ, ಪ್ರಸ್ತುತ ಮೊಬೈಲ್ ಹಾಗೂ ಟಿವಿಗೆ ಯುವಕರು ಹಾಗೂ ಯುವತಿಯರು ಮಾರು ಹೋಗಿದ್ದಾರೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮೂಡಿಸಿ ಅವರನ್ನು ಸುಸಂಸ್ಕೃತರಾಗಿ ಮಾಡಿ ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸಲು ಮುಂದಾಗಬೇಕು ಎಂದು ಸಲಹೆ ನೀಡಿದ ಅವರು, ಮುಖ್ಯವಾಗಿ ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಸಂಸ್ಕಾರ ಬೆಳೆಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಲಾಯಿತು.
ಪ್ರಶಸ್ತಿ ಪ್ರದಾನ: ಈ ಸಂದರ್ಭದಲ್ಲಿ ರಮ್ಯ ಕಲಾ ರಂಗದ ಮಹಿಳಾ ತಂಡದವರಿಂದ ಖ್ಯಾತ ಚಲನಚಿತ್ರ ನಟ ದಿ ಎನ್.ಎಸ್. ರಾವ್ ವಿರಚಿತ ವಿಷಜ್ವಾಲೆ ನಾಟಕ ಪ್ರದರ್ಶಿಸಲಾಯಿತು. ನಾನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಶ್ರೀ ದೇವರ ದಾಸಿಮಯ್ಯ ರಾಷ್ಟ್ರೀಯರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಗಾಯಿತ್ರಿಪೀಠ ಮಹಾಸಂಸ್ಥಾನ, ಹಂಪಿಯ ಪೂಜ್ಯ ಶ್ರೀ ದಯಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಿದ್ದರು. ಸಂಗಮೇಶ್ವರ ಮಹಾಸ್ವಾಮಿಗಳು ನೇತೃತ್ವ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ರಮ್ಯ ಕಲಾರಂಗ ಅಧ್ಯಕ್ಷ ಎಚ್. ರಾಮಣ್ಣ, ಮೈಸೂರಿನ ಜಾನಪದ ತಜ್ಞ ಡಾ. ಪಿ.ಕೆ. ರಾಜಶೇಖರ್ ದಾಸಿಮಯ್ಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಸಾಪ ಜಿಲ್ಲಾ ಅಧ್ಯಕ್ಷ ಎಚ್.ಎಲ್. ಜನಾರ್ಧನ್, ಮಾಜಿ ಅಧ್ಯಕ್ಷ ಬಿ.ಎಂ. ರಾಮಸ್ವಾಮಿ, ಸಮಾಜ ಸೇವಕ ನಾಯಕರಹಳ್ಳಿ ಮಂಜೇಗೌಡ ಹಾಗೂ ಇತರರು ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.