ಬಿತ್ತನೆ ಬೀಜ ವಿತರಣೆಗೆ ಅಗತ್ಯ ಕ್ರಮ
ಅರಸೀಕೆರೆ: ತಾಲೂಕಿನ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಭರಣಿ, ಕೃತಿಕೆ ಮಳೆ ಕೃಪೆ ತೋರಿದ್ದು ಕೃಷಿ ಚಟುವಟಿಕೆ ಪ್ರಾರಂಭಗೊಂಡಿದ್ದು ಇದಕ್ಕನುಸಾರವಾಗಿ ಕೃಷಿ ಇಲಾಖೆ ಕೂಡ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಮರ್ಪಕ ಬಿತ್ತನೆ ಬೀಜಗಳ ವಿತರಣೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆಂಪಚೌಡಪ್ಪ ತಿಳಿಸಿದ್ದಾರೆ.
ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಕಟ್ಟಡದ ವಾಣಿಜ್ಯ ಸಂಕೀರ್ಣದಲ್ಲಿ ನಾನಾ ಬಿತ್ತನೆ ಬೀಜಗಳ ದಾಸ್ತಾನು ಸಂಗ್ರಹಿಸಿದ್ದು ಕೃಷಿ ಅನುವುಗಾರರ ಮೂಲಕ ಬೀಜ ವಿತರಣೆಗೆ ಮುಂದಾಗಿದೆ. ದಾಸ್ತಾನು ಕೇಂದ್ರದಲ್ಲಿ ಹೆಸರು, ಉದ್ದು, ತೊಗರಿ, ಹಲಸಂದೆ, ಹೈಬ್ರೀಡ್ ಜೋಳ, ಸೂರ್ಯಕಾಂತಿ, ಮುಸುಕಿನ ಜೋಳ ಸೇರಿದಂತೆ ಇತರ ಬಿತ್ತನೆ ಬೀಜಗಳನ್ನು ಸರ್ಕಾರ ನಿಗದಿಪಡಿಸಿರುವ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ವಿವರ: ಕಸಬಾ, ಕಣಕಟ್ಟೆ, ಬಾಣಾವರ, ಗಂಡಸಿ, ಜಾವಗಲಲ್ಸೇರಿದಂತೆ ವಿವಿಧ ಹೋಬಳಿ ಕೇಂದ್ರಗಳಲ್ಲಿಯೂ ಮಾರಾಟ ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದ ಅವರು ಇದುವರೆಗೂ 173 ಕ್ವಿಂ. ಹೆಸರು, 221 ಕ್ವಿ ಉದ್ದು, 85 ಕ್ವಿಂ. ಹಲಸಂದೆ, 17 ಕ್ವಿಂ. ತೊಗರಿ ಹಾಗೂ 20 ಕ್ವಿಂ. ಹೈಬ್ರೀಡ್ ಜೋಳವನ್ನು ರೈತರಿಗೆ ಮಾರಾಟ ಮಾಡಲಾಗಿದೆ ಎಂದು ವಿವರ ನೀಡಿದ್ದಾರೆ.
ಇದೇ ವೇಳೆ ರೈತರಿಗೆ ಬಿತ್ತನೆ ಬೀಜದ ಜೊತೆಯಲ್ಲಿಯೇ ಮಣ್ಣಿನ ಫಲವತ್ತತೆ ಹೆಚ್ಚಿಸುವ ಲಘು ಪೋಷಕಾಂಶಗಳಾದ ಜಿಂಕ್ ಸಲ್ಫೇಟ್, ಬೋರಾನ್, ಟ್ರೈಕೋಡರ್ಮದಂತಹ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ. ಮುಂಗಾರು ಹಂಗಾಮು ಅವಧಿಯವರೆಗೂ ಬೀಜ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು ರೈತರು ಇದರ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

