ಹಾಸನ

ಕಣತೂರು ಕಾಲೇಜಿಗೆ ಉತ್ತಮ ಫಲಿತಾಂಶ

Published On :

ಆಲೂರು: ಪಟ್ಟಣದ ಕಣತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಸಂಭ್ರಮ ಕಾಲೇಜಿಗೆ ಲಭಿಸಿದೆ.
ಕೀರ್ತಿ ತಂದವರು: ಗ್ರಾಮೀಣ ಪ್ರದೇಶದಲ್ಲಿರುವ ಈ ಕಾಲೇಜಿನಲ್ಲಿ ದ್ವಿತೀಯ ಪಿ.ಯು. ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾರ್ಮಿಕರ ಮಕ್ಕಳಾದ ಕಲ್ಕೆರೆ ಗ್ರಾಮದ ಆರ್. ರಂಜಿತ ಎಂಬ ವಿದ್ಯಾರ್ಥಿನಿ 600 ಅಂಕಗಳಿಗೆ 537, ತಾಳೂರು ಗ್ರಾಮದ ಟಿ. ಆರ್. ಶಿಲ್ಪ 600 ಕ್ಕೆ 528 ಮತ್ತು ಕೆಸಗೋಡು ಗ್ರಾಮದ ಕಾಂತರಾಜು 600ಕ್ಕೆ 512 ಅಂಕ ಗಳಿಸಿ ಶಾಲೆಗೆ, ಹೆತ್ತವರಿಗೆ ಕೀರ್ತಿ ತಂದಿದ್ದಾರೆ.
ಮೂವರಿಗೆ ಡಿಸ್ಟಿಂಕ್ಷನ್: ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ 49 ವಿದ್ಯಾರ್ಥಿಗಳ ಪೈಕಿ 42 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಶೇ. 85.7 ಫಲಿತಾಂಶ ಬಂದಿದೆ. 19 ಗಂಡು ಮತ್ತು 23 ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಮೂವರು ಅತ್ಯುನ್ನತ ಶ್ರೇಣಿ, 24 ಪ್ರಥಮ, 10 ದ್ವಿತೀಯ ಮತ್ತು 5 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಪ. ಜಾತಿ, ವರ್ಗದ 24 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅವುಗಳಲ್ಲಿ ಮೂವರು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಕಣತೂರಿನಲ್ಲಿ 2006ರಲ್ಲಿ ಸರಕಾರ ಕಾಲೇಜು ಪ್ರಾರಂಭ ಮಾಡಿತ್ತು. ಇದರಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳ ಓದಿಗೆ ಹೆಚ್ಚಿನ ಅನುಕೂಲವಾಗಿದೆ. ಕಣತೂರು ಕೇಂದ್ರಕ್ಕೆ ಕೆಸಗೋಡು, ಕಾಮತಿ, ಚಿಕ್ಕಕಣಗಾಲು ಸರಕಾರಿ ಪ್ರೌಢಶಾಲೆಗಳು ಒಳಪಡುತ್ತವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.