ಹಾಸನ

ಕನ್ನಡತನದಿಂದ ಕನ್ನಡ ಕಟ್ಟಬೇಕು: ರಾಮಸ್ವಾಮಿ

Published On :

ಹೊಳೆನರಸೀಪುರ: ಇಂದಿನ ದಿನದಲ್ಲಿ ಕನ್ನಡ ಭಾಷೆ ಹಾಗೂ ಸಾಹಿತ್ಯ ಪರಂಪರೆಯು ಎದುರಿಸುತ್ತಿರುವ ಸವಾಲುಗಳು, ಭವಿಷ್ಯದ ಚಿಂತನೆಗಳು ಹಾಗೂ ಕನ್ನಡವನ್ನು ಕಟ್ಟುವ ಕೆಲಸವನ್ನು ಇನ್ನಷ್ಟು ಕನ್ನಡತನದಿಂದ ಮಾಡಬೇಕಾದ ಅನಿವಾರ್ಯತೆ ಹಾಗೂ ಅವಶ್ಯಕತೆ ಇದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬಿ.ಎನ್.ರಾಮಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನದ ಆಚರಣೆ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿಯ ಕುರಿತಂತೆ ಮಾತನಾಡಿದರು.
ಹೊಸ ಪ್ರಶಸ್ತಿ ಜಾರಿ: ಜಿಲ್ಲಾ ಕಸಾಪ ಘಟಕದ ವತಿಯಿಂದ ನೀಡಲಾಗುತ್ತಿರುವ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಪ್ರಶಸ್ತಿ, ಡಾ.ಎಸ್.ಕೆ. ಕರೀಂಖಾನ್ ಪ್ರಶಸ್ತಿಗಳೊಂದಿಗೆ ಈ ಬಾರಿಯಿಂದ ಅನಕೃ ಪ್ರಶಸ್ತಿಯನ್ನು ನೀಡುವ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾ ಘಟಕದ ವತಿಯಿಂದ ತಾಲೂಕು ಸಾಹಿತ್ಯ ಸಮ್ಮೇಳನ ನಡೆಸಲು ಕೇಂದ್ರ ಘಟಕದ ಸಹಾಯಧನದೊಂದಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಸಾಹಿತ್ಯ ಪರಿತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ.ಎಚ್.ಎಲ್.ಜನಾರ್ಧನ್ ಭರವಸೆ ನೀಡಿದರು. ನಗರ ಠಾಣೆಯ ಎಸ್ಸೈ ಶಿವಕುಮಾರ್, ಪತ್ರಕರ್ತರು ಹಾಗೂ ಕಸಾಪ ಜಿಲ್ಲಾ ಉಪಾಧ್ಯಕ್ಷ ಎಚ್.ವಿ. ಸುರೇಶ್ ಕುಮಾರ್ ಹಾಗೂ ಕಸಾಪ ತಾಲೂಕು ಘಟಕದ ಅಧ್ಯಕ್ಷ ಎಚ್.ಎಸ್. ಪುಟ್ಟಸೋಮಪ್ಪ ಮಾತನಾಡಿದರು. ತಾಲೂಕು ಕಸಾಪ ಮಾಜಿ ಅಧ್ಯಕ್ಷರು, ರೋಟರಿ, ಕರವೇ, ಸ್ವಾಮಿ ವಿವೇಕಾನಂದ ಯುವ ವೇದಿಕೆ, ಲಯನ್ಸ್ ಕ್ಲಬ್, ಜಾನಪದ ಪರಿಷತ್ನ ವಿವಿಧ ಘಟಕಗಳ ಪದಾಧಿಕಾರಿಗಳು, ಕಸಾಪ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.