ಹಾಸನ

ಡೊನೇಷನ್ ಹಾವಳಿ ತಡೆಗಟ್ಟಿ

Published On :

ಹಾಸನ: ಡೊನೇಷನ್ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ಮತ್ತು ಡೊನೇಷನ್ ನಿಯಂತ್ರಿಸಲು ಕಾನೂನುಗಳು ಜಾರಿಗೆ ಬಂದಿದೆ. ಆದರೆ ಶಿಕ್ಷಣ ಸಂಸ್ಥೆಗಳು ಇದನ್ನು ಜಾರಿಗೊಳಿಸಿಲ್ಲ. ಸಾಮಾಜಿಕ ಸೇವೆ ಮಾಡಬೇಕಾದ ಶಿಕ್ಷಣ ಸಂಸ್ಥೆಗಳು ಇಂದು ಶಿಕ್ಷಣದ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಯಮಗಳು ಗಾಳಿಗೆ: ಶಿಕ್ಷಣ ಕ್ಷೇತ್ರದಲ್ಲಿ ಡೊನೇಷನ್ ಹಾವಳಿ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ರಚನೆ ಮಾಡಬೇಕಾದದ್ದು ಕಡ್ಡಾಯ. ಆದರೆ ಇದುವರೆಗೂ ಇಂಥ ಪ್ರಾಧಿಕಾರ ಇದೆ ಎನ್ನುವ ಅರಿವೇ ಇಲ್ಲದೆ ಶಿಕ್ಷಣ ಇಲಾಖೆ ಕೈಕಟ್ಟಿ ಕುಳಿತಿದೆ. ಪುಸ್ತಕಗಳ ಹೆಸರಿನಲ್ಲಿ ಟ್ಯೂಷನ್ ಹೆಸರಿನಲ್ಲಿ, ವಿಭಿನ್ನ ರೀತಿಯ ಶುಲ್ಕಗಳ ಹೆಸರಿನಲ್ಲಿ, ಶಿಕ್ಷಣ ಹಕ್ಕು ಕಾಯ್ದೆ ಹೇಳುವ ಎಲ್ಲಾ ನಿಯಮಗಳನ್ನು ಇಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಗಾಳಿಗೆ ತೂರಿವೆ ಎಂದು ಆರೋಪಿಸಿದರು.
ಕ್ಷೇತ್ರ ಶಿಕ್ಷಣಾಧಿಕಾಗಳು ಮತ್ತು ಶಿಕ್ಷಣ ಇಲಾಖೆ ಯಾವುದೇ ಕ್ರಮಗಳನ್ನು ಜಾರಿಗೊಳಿಸದಿರುವುದು ಖಾಸಗಿ ಶಿಕ್ಷಣ ಸಂಸ್ಥೆಗಳೊಟ್ಟಿಗೆ ಶಾಮೀಲಾದಂತೆ ಕಾಣುತ್ತಿದೆ. ಆದ್ದರಿಂದ ತಕ್ಷಣ ಸಾಮಾನ್ಯ ಜನರಿಗೂ ಶಿಕ್ಷಣ ಸಿಗುವವಂತಾಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಎಚ್.ಇ. ಅನ್ಷಾದ್, ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪ್ರದೀಪ್ ಕುಮಾರ್, ಉಪಾಧ್ಯಕ್ಷೆ ಎಂ.ಎಂ. ಆಶಾ, ಸುಪ್ರತ್, ಲಾವಣ್ಯ, ಸಿತಾರ, ರಕ್ಷಿತಾ, ಸುಮಾ, ಶಿವರಾಂ, ಸುಮಶ್ರೀ, ಶಾರುಕ್, ಸಿಐಟಿಯು ಅರವಿಂದ್, ಪೃಥ್ವಿ, ಮಾದಿಗ ದಂಡೋರ ವಿಜಯ್ ಕುಮಾರ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.