ಹಾಸನ

ವಿದ್ಯುತ್ ಉತ್ಪಾದನೆಗೆ ಸೋಲಾರ್ ನೀತಿ ಜಾರಿ

Published On :

ಕ.ಪ್ರ.ವಾರ್ತೆ    ಮೈಸೂರು    ಮೇ 13
ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದಿಸಲು ಹೊಸದಾಗಿ ಸೋಲಾರ್ (ಸೌರಶಕ್ತಿ) ನೀತಿ ಜಾರಿಗೊಳಿಸಲು ಚಿಂತನೆ ನಡೆದಿದೆ. ಈ ಬಗ್ಗೆ ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಮೇ 15ರಂದು ಚರ್ಚಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸೋಲಾರ್ ನೀತಿ ಜಾರಿಗೊಳಿಸುವ ಸಂಬಂಧ ಮೇ 15ರಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು. ಈ ನೀತಿಯಿಂದ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸಿ, ಹೆಚ್ಚಿನ ವಿದ್ಯುತ್ನ್ನು ಸರ್ಕಾರಕ್ಕೆ ಪೂರೈಸಬಹುದು ಎಂದರು.
ವಿದ್ಯುತ್ ದರ ಹೆಚ್ಚಿಸಿರುವುದು ರಾಜ್ಯ ಸರ್ಕಾರದ ತೀರ್ಮಾನವಲ್ಲ. ವಿದ್ಯುತ್ ಉತ್ಪಾದನಾ ಕಂಪನಿಗಳ ಬೇಡಿಕೆಯ ಆಧಾರದ ಮೇಲೆ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಚರ್ಚಿಸಿ 32 ಪೈಸೆ ದರ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ರೈತರು, ಭಾಗ್ಯಜ್ಯೋತಿ ಇನ್ನಿತರ ಫಲಾನುಭವಿಗಳಿಗೆ ವಿದ್ಯುತ್ ಬೆಲೆ ಹೆಚ್ಚಿಸಿಲ್ಲ. ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಹಿಂದಿಗಿಂತ ಈಗ ಉತ್ತಮವಾಗಿದ್ದು, ಕೆಲವು ತಾಂತ್ರಿಕ ಕಾರಣದಿಂದ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಇದರ ಹೊರತಾಗಿ ಲೋಡ್ ಶೆಡ್ಡಿಂಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿಲ್ಲ ಎಂದರು.
ಸಿಎಂ ಜತೆ ಭಿನ್ನಾಭಿಪ್ರಾಯ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರು ದೊಡ್ಡವರಾಗಿದ್ದು, ಇಂಧನ ಇಲಾಖೆ ಅಭಿವೃದ್ಧಿಗೆ ಅಗತ್ಯ ಸಲಹೆ ನೀಡಿದರೆ ಅದನ್ನು ಸ್ವೀಕರಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.