ಹಾಸನ

'ಸರ್ಕಾರಿ ಕಾಲೇಜು ಅಭಿವೃದ್ಧಿಯಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದು'

Published On :

ಹಾಸನ: ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗಾಗಿ, ವ್ಯಕ್ತಿತ್ವ ವಿಕಸನಕ್ಕಾಗಿ ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಬೆಳೆಯುತ್ತಿರುವ ಸರ್ಕಾರಿ ಕಾಲೇಜುಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಪಾತ್ರ ಅತ್ಯಂತ ಮಹತ್ವವಾದುದು ಎಂದು ತಾಲೂಕಿನ ಮೊಸಳೆ ಹೊಸಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಡಿ. ಶ್ರೀನಿವಾಸ ಅಭಿಪ್ರಾಯಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವ ವಿದ್ಯಾನಿಲಯ ಧನ ಸಹಾಯ ಆಯೋಗ ದೇಶದಲ್ಲಿ ಉನ್ನತ ಶಿಕ್ಷಣವನ್ನು ಗುಣಾತ್ಮಕವಾಗಿ ಬೆಳೆಸುವ ಉದ್ದೇಶದಿಂದ ಅನೇಕ ದೀರ್ಘ ಕಾಲೀನ ಯೋಜನೆಗಳನ್ನು ಹಾಕಿಕೊಂಡಿದೆ. ವಿಶೇಷವಾಗಿ ಸರ್ಕಾರಿ ಕಾಲೇಜುಗಳ ಸರ್ವಾಗೀಣ ಬೆಳವಣಿಗೆಗಾಗಿ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ ಯೋಜನೆಯಡಿ ಒಂದು ಲಕ್ಷ ಕೋಟಿ ರು. ಮೀಸಲಿಟ್ಟಿದೆ ಎಂದು ಹೇಳಿದರು.
ಗುಣಾತ್ಮಕ ಪ್ರಗತಿ: ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್ತು ಕಾಲೇಜುಗಳನ್ನು ಮೌಲ್ಯಾಂಕನ ಪ್ರಕ್ರಿಯೆಗೆ ಒಳಪಡಿಸಿ ಅಲ್ಲಿನ ಗುಣಾತ್ಮಕ ಶೈಕ್ಷಣಿಕ ಪ್ರಗತಿಗೆ ತಕ್ಕಂತೆ ಶ್ರೇಣಿಗಳನ್ನು ನೀಡುತ್ತಿದೆ. ರಾಜ್ಯ ಸರ್ಕಾರ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಅಂತರ್ಜಾಲ ವ್ಯವಸ್ಥೆ, ಎಜುಸ್ಯಾಟಟ್ಶಿಕ್ಷಣ, ಕೌಶಲ್ಯ ವೃದ್ಧಿಗಾಗಿ ನೈಪುಣ್ಯ ನಿಧಿಯಂತಹ ಕಾರ್ಯಕ್ರಮಗಳನ್ನು ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಹಮ್ಮಿಕೊಂಡಿದೆ. ಎಲ್ಲ ಪ್ರಯತ್ನಗಳ ಫಲವಾಗಿ ಸರ್ಕಾರಿ ಕಾಲೇಜುಗಳು ಎಲ್ಲ ದೃಷ್ಟಿಯಿಂದಲೂ ಗುಣಾತ್ಮಕ ಪ್ರಗತಿ ಸಾಧಿಸುತ್ತಿವೆ ಎಂದು ಮಾಹಿತಿ ನೀಡಿದರು.
ಗ್ರಾಮೀಣ ವಿದ್ಯಾರ್ಥಿಗಳನ್ನು ಜಾಗತಿಕ ಸ್ಪರ್ಧೆಗೆ ಸಜ್ಜುಗೊಳಿಸಲು ಈ ಕಾಲೇಜು ಪಣತೊಟ್ಟಿದ್ದು, ನಿರಂತರ ಅಂತರ್ಜಲ ವ್ಯವಸ್ಥೆ, ದೃಶ್ಯ- ಶ್ರವ್ಯ ಬೋಧನೆ, ಎಜುಸ್ಯಾಟ್ ಮೂಲಕ ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಸ್ನಾತಕೋತ್ತರ ಶಿಕ್ಷಣಕ್ಕೆ ತರಬೇತಿ ಇತ್ಯಾದಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. 15 ವಿವಿಧ ವೇದಿಕೆಗಳ ಮೂಲಕ ಪ್ರಸ್ತುತ ವರ್ಷದಲ್ಲಿ 45 ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಪ್ರತಿಭೆಗಳನ್ನು ಅನಾವರಣಗೊಳಿಸಲಾಗಿದೆ. ಇವೆಲ್ಲಾ ಪ್ರಯತ್ನಗಳ ಫಲವಾಗಿ ಕಾಲೇಜಿಗೆ ಬಿ.ಎ. ಹಾಗೂ ಬಿ.ಕಾಂ. ವಿಭಾಗದಲ್ಲಿ 100ಕ್ಕೆ 100 ಫಲಿತಾಂಶ ಬಂದಿರುವುದು ಗ್ರಾಮೀಣ ಪ್ರದೇಶದ ಕಾಲೇಜಿನ ವಿಶೇಷ ಸಾಧನೆಯಾಗಿದ್ದು, ಕಾಲೇಜನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ದೃಷ್ಟಿಯಿಂದ ಸಾರ್ವಜನಿಕರು ಮಹತ್ವದ ಪಾತ್ರ ವಹಿಸಬೇಕಿದೆ ಎಂದರು.
ಎಸ್.ದ್ಯಾವೇಗೌಡ, ಶೇಷಾದ್ರಿ, ಚಂದ್ರೇಗೌಡ, ಹುಳವಾರೆ ಶ್ರೀನಿವಾಸ್, ಹನುಮೇಗೌಡ, ಮಂಜುನಾಥ್, ರೈಸ್ಮಿಲ್ ದೇವೇಗೌಡ, ಕೃಷ್ಣ ಹಾಗೂ ಪ್ರಕಾಶ್ ಮಾತನಾಡಿ, ಯಾವುದೇ ಕಾಲೇಜಿಗಿಂತಲೂ ಗುಣಾತ್ಮಕವಾದ ಮೂಲಭೂತ ಸೌಲಭ್ಯ, ಶೈಕ್ಷಣಿಕ ವಾತಾವರಣ, ಸಾಂಸ್ಕತಿಕ ಹಾಗೂ ಕ್ರೀಡಾ ಸಮೃದ್ಧಿ ಹಾಗೂ ಅತ್ಯುತ್ತಮ ಫಲಿತಾಂಶ ಹೊಂದಿರುವ ಕಾಲೇಜಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಬಳಸಿಕೊಳ್ಳದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.