ಹಾಸನ

13 ಜೂಜುಕೋರರ ಬಂಧನ

Published On :

ಹಾಸನ: ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಅಂದರ್ ಬಾಹರ್ ಜೂಜಾಡುತ್ತಿದ್ದ 13 ಮಂದಿಯನ್ನು ಪೊಲೀಸರು ಬಂಧಿಸಿ, ರು. 33, 135 ನಗದನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ತಾಲೂಕಿನ ಹಳೇಕೋಟೆ ಹೋಬಳಿ, ಕಡವಿನಕೋಟೆ ಕ್ರಾಸ್ ರೇಲ್ವೆ ಸೇತುವೆ ಹತ್ತಿರ ಅಂದರ್ ಬಾಹರ್ ಜೂಜಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳಾದ ಮಂಜಣ್ಣ, ರಾಜೇಗೌಡ, ಕಂಬೇಗೌಡ, ಶಿವನಂಜೇಗೌಡ ಎಲ್ಲರೂ ಕಡವಿನಹೊಸಹಳ್ಳಿ ಗ್ರಾಮದವರು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಹೊಳೆನರಸೀಪುರ ನಗರ ಠಾಣೆಯ ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಅರಸೀಕೆರೆ ನಗರದ ರೇಲ್ವೆ ಇಲಾಖೆಯ ಖಾಲಿ ಜಾಗದಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಅರಸೀಕೆರೆಯ 9 ಮಂದಿಯನ್ನು ಬಂಧಿಸಲಾಗಿದೆ. ಮುರುಳಿ, ಪ್ರವೀಣ್, ಕಂದನ, ಎಡ್ವರ್ಡ್, ಪ್ರತಾಪ್, ಶಂಕರ್, ಅರುಣ, ರಮೇಶ್, ಯಶುರಾಜ್ ಎಲ್ಲರೂ ಅರಸೀಕೆರೆ ಪಟ್ಟಣದವರು ಎಂದು ತಿಳಿದು ಬಂದಿದೆ.  ಪಿಎಸ್ಐ ಐಯ್ಯಣ್ಣಗೌಡ ಹಾಗೂ ಸಿಬ್ಬಂದಿ  ದಾಳಿ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.