ಹಾಸನ

ಉಡಿಸಲಮ್ಮ ರಥ, ಚೌಡೇಶ್ವರಿ ಸಿಡಿ

Published On :

ಅರಸೀಕೆರೆ: ತಾಲೂಕಿನ ಕಾಮಸಮುದ್ರ ಗ್ರಾಮದ ಉಡಿಸಲಮ್ಮ ದೇವಿ ರಥೋತ್ಸವ ಹಾಗೂ ಚೌಡೇಶ್ವರಿ ದೇವಿ ಸಿಡಿ ಮಹೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.
ಜಾತ್ರೆ ಹಾಗೂ ಸಿಡಿ ಮಹೋತ್ಸವದಲ್ಲಿ ಗ್ರಾಮಕ್ಕೆ ಹೊಂದಿಕೊಂಡಂತಿರುವ ಪಡುವನಹಳ್ಳಿ, ತುಂಬಾಪುರ, ಕಸುವನಹಳ್ಳಿ, ತುಡಿಕೇನಹಳ್ಳಿ ಸೇರಿದಂತೆ ಸುತಮುತ್ತ್ತಲಿನ ಹಳ್ಳಿಗಳ ಗ್ರಾಮಸ್ಥರು ಪಾಲ್ಗೊಂಡಿದ್ದರು. ಉಡಿಸಲಮ್ಮ ದೇವಿ ರಥೋತ್ಸವ ಬೆಳಗ್ಗೆ 11 ಕ್ಕೆ ನೆರವೇರಿತು. ಚೌಡೇಶ್ವರಿ ಸಿಡಿ ಮಹೋತ್ಸವ ಮಧ್ಯಾಹ್ನ ಜರುಗಿತು.
ಕಳೆದೊಂದು ವಾರದಿಂದ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಕಳೆ ರಂಗು ತಂದಿತ್ತು. ದೇವಿಯರ ಮೂಲ ಸನ್ನಿಧಿಯಲ್ಲಿ ನಾನಾ ಬಗೆಯ ಪೂಜಾ ಕೈಂಕರ್ಯಗಳು ಧಾರ್ಮಿಕ ವಿಧಿ- ವಿಧಾನಗಳಿಂದ ಶಾಸ್ತ್ರೋಕ್ತವಾಗಿ ನೆರವೇರಿದವು. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ರಥವನ್ನು ಬಣ್ಣ ಬಣ್ಣದ ಬಟ್ಟೆ ಹಾಗೂ ನಾನಾ ಹೂವಿನ ಹಾರಗಳಿಂದ ಅಲಂಕರಿಸಲಾಗಿತ್ತು.
ರಥೋತ್ಸವದ ಅಂಗವಾಗಿ ಗ್ರಾಮದೇವತೆ ಉಡಿಸಲಮ್ಮ ದೇವಿಯವರಿಗೆ ಬೆಳಗಿನಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದ ನಂತರ ರಥದಲ್ಲಿ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ದೇವಿಗೆ ಜಯಘೋಷ ಹಾಕುತ್ತಿದ್ದಂತೆ ರಥ ಎಳೆಯಲು ಭಕ್ತರು ಸನ್ನದ್ಧರಾದರು. ಇದೇ ವೇಳೆ ಭಕ್ತಾದಿಗಳು ರಥದ ಕಲಶಕ್ಕೆ ಬಾಳೆಹಣ್ಣು, ಧವನ ಎಸೆದು ಭಕ್ತಿ ಸಮರ್ಪಿಸಿದರು. ಜಾತ್ರಾ ಮಹೋತ್ಸವದಲ್ಲಿ ಚೋಮನ ಕುಣಿತ ಗಮನ ಸೆಳೆಯುವಂತಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.