ಮಣ್ಣಿನ ಆರೋಗ್ಯ ವೃದ್ಧಿಗೆ ಪ್ರಾಮುಖ್ಯ ನೀಡಿ
ಕ.ಪ್ರ.ವಾರ್ತೆ ಹಾಸನ ಮೇ 13
ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ದೇಶದ ಆಹಾರ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳಬೇಕಾದರೆ ಮಣ್ಣಿನ ಆರೋಗ್ಯ ಕಾಪಾಡಬೇಕು. ಮಣ್ಣಿನ ಆರೋಗ್ಯ ವೃದ್ಧಿಸಲು ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕು ಹಾಗೂ ಈ ನಿಟ್ಟಿನಲ್ಲಿ ಲಘುಪೋಷಕಾಂಶಗಳ ಬಳಕೆಯನ್ನು ಉತ್ತೇಜಿಸಬೇಕು ಎಂದು ಜಂಟಿ ಕೃಷಿ ನಿದೇಶಕರ ಕಚೇರಿ ಕೇಂದ್ರ ಸ್ಥಾನಿಕ ಸಹಾಯಕ ಕೃಷಿ ನಿರ್ದೇಶಕ ನಾಗರಾಜ್ ತಿಳಿಸಿದರು.
ಕೃಷಿ ಇಲಾಖೆ ಹಾಗೂ ಕಂದಲಿಯ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಭೂಚೇತನ ಯೋಜನೆಯಡಿಯಲ್ಲಿ ರೈತ ಅನುವುಗಾರರಿಗೆ ಮೇ 12ರಿಂದ ಮೇ 16ರವರೆಗೆ ಏರ್ಪಡಿಸಿರುವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರ ಕಂದಲಿಯ ಕಾರ್ಯಕ್ರಮ ಸಂಯೋಜಕ ಡಾ. ಬಿ.ಎಸ್. ಬಸವರಾಜು ಮಾತನಾಡಿ, ಭೂಚೇತನ ಯೋಜನೆಯಡಿ ಆಯ್ಕೆಯಾಗಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಎಲ್ಲಾ ರೈತ ಅನುವುಗಾರರು ತಮ್ಮ ತಾಂತ್ರಿಕ ಜ್ಞಾನದ ಮಟ್ಟ ಹೆಚ್ಚಿಸಿಕೊಂಡು ರೈತಬಾಂಧವರಿಗೆ ಬೆಳೆ ಉತ್ಪಾದನಾ ತಾಂತ್ರಿಕತೆ, ಸಾವಯವ ಗೊಬ್ಬರ, ಹಸಿರೆಲೆಗೊಬ್ಬರ ಬಳಕೆಯ ಜೊತೆಗೆ ಲಘುಪೋಷಕಾಂಶಗಳ ಬಳಕೆ, ಭೂಮಿಯಲ್ಲಿ ಸಾವಯವ ಇಂಗಾಲವನ್ನು ಹೆಚ್ಚುಮಾಡಿ, ಗುಣಮಟ್ಟದ ಇಳುವರಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ, ಕೃಷಿ ಕಾಲೇಜು ಹಾಗೂ ಸಂಶೋಧನಾ ಕೇಂದ್ರಗಳಲ್ಲಿ ನುರಿತ ವಿಜ್ಞಾನಿಗಳ ತಂಡವಿದ್ದು, ರೈತ ಅನುವುಗಾರರು ಅಗತ್ಯ ತಾಂತ್ರಿಕ ಮಾಹಿತಿ ಪಡೆಯಲು ತಿಳಿಸಿದರು.
ಸಕಲೇಶಪುರ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಯೋಗೇಶ್ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ಎಸ್. ಚನ್ನಕೇಶವ, ಡಾ. ಟಿ.ಎಸ್.ಮಂಜುನಾಥಸ್ವಾಮಿ, ಡಾ. ಜಿ.ಎಸ್. ಕೃಷ್ಣಾರೆಡ್ಡಿ, ಡಾ. ಕೆ.ಜೆ. ಕಾಂತರಾಜು ಹಾಗೂ ಡಾ. ಎಚ್.ಕೆ. ಪಂಕಜಾ ಇದ್ದರು. ಬೇಲೂರು ಮತ್ತು ಸಕಲೇಶಪುರ ತಾಲ್ಲೂಕಿನ ರೈತ ಮತ್ತು ರೈತ ಮಹಿಳಾ ಅನುವುಗಾರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

