ಹಾಸನ

ಸಕಲೇಶಪುರ ಇತಿಹಾಸದಲ್ಲೇ ದಾಖಲೆ ಫಲಿತಾಂಶ

Published On :

ಸಕಲೇಶಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಬಾಳ್ಳುಪೇಟೆ ಗ್ರಾಮದ ವಿವೇಕ ಆಂಗ್ಲ ಪ್ರೌಡಶಾಲೆಯ ವೇದಾಂತ್ 606 ಅಂಕ ಗಳಿಸುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದ್ದರೆ.
ಪಟ್ಟಣದ ರೋಟರಿ ಶಾಲೆಯ ಪ್ರಜ್ವಲ್ ಶೆಟ್ಟಿ 599 ಅಂಕಗಳಿಸಿ ದ್ವೀತಿಯ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ. ಪಟ್ಟಣದ ಸೇಂಟ್ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿನಿ ಭೂಮಿಕಾ ಅವರು, 587 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ.
ಆದರವಳ್ಳಿ ಸರ್ಕಾರಿ ಪ್ರೌಢಶಾಲೆ, ಪಟ್ಟಣದ ಸಂತಜೋಸೆಫರ ಆಂಗ್ಲ ಪ್ರೌಡಶಾಲೆ, ವಿವೇಕ ಆಂಗ್ಲ ಪ್ರೌಢಶಾಲೆ, ಅಲ್ ಅಮೀನ್ ಉರ್ದು ಪ್ರೌಢಶಾಲೆ ಶೇ. 100 ಫಲಿತಾಂಶ ಪಡೆದಿದ್ದಾರೆ. ಉಚ್ಚಂಗಿ ಪ್ರೌಢಶಾಲೆಯ ರಂಜಿತ್, ವಿವೇಕ ಆಂಗ್ಲ ಪ್ರೌಢಶಾಲೆಯ ವೇದಾಂತ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೀಪಿಕಾ, ಚಾಂದಿನಿ ಕನ್ನಡ ಐಚ್ಛಿಕ ವಿಷಯದಲ್ಲಿ 124 ಅಂಕಗಳನ್ನು ಗಳಿಸಿದ್ದಾರೆ.
ತಾಲೂಕಿನಲ್ಲಿ ಒಟ್ಟು 1589 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 1273 ವಿದ್ಯಾರ್ಥ್ಥಿಗಳು ತೇರ್ಗಡೆ ಹೊಂದುವ ಮೂಲಕ ತಾಲೂಕಿಗೆ ಶೇ. 80.11ರಷ್ಟು ಪಲಿತಾಂಶ ಪಡೆಯುವ ಮೂಲಕ ತಾಲೂಕಿನ ಇತಿಹಾಸದಲ್ಲಿ ಅತೀ ಹೆಚ್ಚು ಫಲಿತಾಂಶ ಪಡೆದಂತಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.